ಕಾರಿನಲ್ಲಿ ಸಾಗಿಸುತ್ತಿದ್ದ ₹2 ಕೋಟಿ ಹಣ ಜಪ್ತಿ

| Published : Apr 21 2024, 02:19 AM IST / Updated: Apr 21 2024, 06:58 AM IST

ಸಾರಾಂಶ

ಬಿನ್ನಿಪೇಟೆಯ ಟ್ಯಾಂಕ್ ಬಂಡ್ ರಸ್ತೆಯ ಇಟಿಎ ಮಾಲ್ ಬಳಿ ಕಾರೊಂದರಲ್ಲಿ ಸಾಗಿಸುತ್ತಿದ್ದ ₹2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

  ಬೆಂಗಳೂರು :  ಬಿನ್ನಿಪೇಟೆಯ ಟ್ಯಾಂಕ್ ಬಂಡ್ ರಸ್ತೆಯ ಇಟಿಎ ಮಾಲ್ ಬಳಿ ಕಾರೊಂದರಲ್ಲಿ ಸಾಗಿಸುತ್ತಿದ್ದ ₹2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಶನಿವಾರ ಸಂಜೆ ಸುಮಾರು 4 ಗಂಟೆಯಲ್ಲಿ ವೆಂಕಟೇಶ್ ಎಂಬುವವರಿಗೆ ಸೇರಿದ ಕೆಎ 09 ಎಂಬಿ 2412 ನೋಂದಣಿ ಸಂಖ್ಯೆಯ ಕಾರಿನಲ್ಲಿ ನಗದು ಹಣ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಚುನಾವಣಾಧಿಕಾರಿಗಳು ಕಾರನ್ನು ತಡೆದು ಪರಿಶೀಲನೆ ಮಾಡಿದಾಗ ಸುಮಾರು ಎರಡು ಕೋಟಿ ಹಣ ಪತ್ತೆಯಾಗಿದೆ. ಕೂಡಲೇ ಆ ಕಾರು ಹಾಗೂ ಹಣವನ್ನು ಜಪ್ತಿ ಮಾಡಿದ್ದಾರೆ.

ಮಲ್ಲೆಶ್ವರದ ಕೋದಂಡರಾಮಪುರ ಕೆನರಾ ಬ್ಯಾಂಕ್ ಶಾಖೆಯಲ್ಲಿ ಮಾ.27ರಂದು ಈ ಹಣವನ್ನು ಡ್ರಾ ಮಾಡಲಾಗಿತ್ತು. ₹2 ಕೋಟಿ ಹಣವನ್ನು ಮೈಸೂರಿಗೆ ಕಾರಿನಲ್ಲಿ ಸಾಗಿಸಲಾಗುತ್ತಿತ್ತು ಎಂದು ಬ್ಯಾಂಕ್ ನಿಂದ ಹಣ ಡ್ರಾ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಕಾರಿನಲ್ಲಿ ಸಾಗಿಸುತ್ತಿದ್ದ ₹2 ಕೋಟಿಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಪರಿಶೀಲಿಸಲಾಗುತ್ತಿದೆ. ಚುನಾವಣಾಧಿಕಾರಿಗಳಿಂದ ದೂರು ಸ್ವೀಕರಿಸಿ ಕಾನೂನು ಕ್ರಮ ಕೈಗೊಳ್ಖುವುದಾಗಿ ಕಾಟನ್‌ಪೇಟೆ ಠಾಣೆ ಪೊಲೀಸರು ತಿಳಿಸಿದ್ದಾರೆ. ಈ ಹಣದ ಮೂಲ ಕೆದಕಲು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಪ್ರಕರಣ ವರ್ಗಾವಣೆಯಾಗಲಿದೆ.