4ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

| Published : Apr 19 2024, 01:01 AM IST / Updated: Apr 19 2024, 06:43 AM IST

ಸಾರಾಂಶ

ಮೇ 13ರಂದು ಲೋಕಸಭೆಗೆ ನಡೆಯುವ 4ನೇ ಹಂತದ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟಿಸಲಾಗಿದೆ.

ನವದೆಹಲಿ: ಮೇ 13ರಂದು ಲೋಕಸಭೆಗೆ ನಡೆಯುವ 4ನೇ ಹಂತದ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟಿಸಲಾಗಿದೆ. ಇದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೂ ಚಾಲನೆ ಸಿಕ್ಕಿದೆ. 9 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 96 ಸ್ಥಾನಗಳಿಗೆ ಮೇ 13ರಂದು ಚುನಾವಣೆ ನಡೆಯಲಿದೆ. ಈ ಪೈಕಿ ಆಂಧ್ರಪ್ರದೇಶದ ಎಲ್ಲಾ 25 ಮತ್ತು ತೆಲಂಗಾಣದ ಎಲ್ಲಾ 17 ಲೋಕಸಭಾ ಕ್ಷೇತ್ರಗಳು ಕೂಡಾ ಸೇರಿವೆ. ಇದರ ಜೊತೆಗೆ ಆಂಧ್ರಪ್ರದೇಶದ ವಿಧಾನಸಭೆಗೂ ಕೂಡಾ ಅಂದೇ ಚುನಾವಣೆ ನಡೆಯಲಿದೆ.

ಈ ಕ್ಷೇತ್ರಗಳಿಗೆ ಏ.25ರವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಏ.26ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏ.29ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಎಲ್ಲೆಲ್ಲಿ ಚುನಾವಣೆ:

ಬಿಹಾರ, ಜಾರ್ಖಂಡ್‌, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಯಲಿದೆ.