ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ಪ್ರಾರ್ಥನೆಗೆ ತಡೆ ನೀಡಲು ಸುಪ್ರೀಂ ನಕಾರ

| Published : Apr 02 2024, 01:06 AM IST

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ಪ್ರಾರ್ಥನೆಗೆ ತಡೆ ನೀಡಲು ಸುಪ್ರೀಂ ನಕಾರ
Share this Article
  • FB
  • TW
  • Linkdin
  • Email

ಸಾರಾಂಶ

ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿರುವ ವಿಗ್ರಹಕ್ಕೆ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ನೀಡಿದ ಅನುಮತಿ ರದ್ದುಪಡಿಸಬೇಕೆಂಬ ಕೋರಿಕೆಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ.

ನವದೆಹಲಿ: ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿರುವ ವಿಗ್ರಹಕ್ಕೆ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ನೀಡಿದ ಅನುಮತಿ ರದ್ದುಪಡಿಸಬೇಕೆಂಬ ಕೋರಿಕೆಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ. ಈ ಕುರಿತು ಮಸೀದಿ ಆಡಳಿತ ಮಂಡಳಿ ಮಾಡಿದ್ದ ಮನವಿಯನ್ನು ಅದು ತಿರಸ್ಕರಿಸಿದೆ. ಆದರೆ ಮಸೀದಿ ಸಮಿತಿಯ ಅರ್ಜಿಯ ಹಿನ್ನೆಲೆಯಲ್ಲಿ, ಅಭಿಪ್ರಾಯ ಬಯಸಿ ಕಾಶಿ ವಿಶ್ವನಾಥ ದೇಗುಲ ಟ್ರಸ್ಟಿಗಳಿಗೆ ನೋಟಿಸ್‌ ಜಾರಿ ಮಾಡಿದೆ. ಜೊತೆಗೆ ಮಸೀದಿಯಲ್ಲಿ ವ್ಯಾಪ್ತಿಯಲ್ಲಿ ಮುಸ್ಲಿಮರಿಗೆ ನಮಾಜ್‌ ಮಾಡಲು ಇರುವ ಅವಕಾಶವೂ ಯಥಾ ಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಹೇಳಿ, ವಿಚಾರಣೆಯನ್ನು ಏ.30ಕ್ಕೆ ಮುಂದೂಡಿದೆ. ದೇಗುಲದ ನೆಲ ಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡಿ ಫೆ.26ರಂದು ಅಲಹಾಬಾದ್‌ ಹೈಕೋರ್ಟ್‌ ಆದೇಶ ಹೊರಡಿಸಿತ್ತು.