ಮೋದಿ ಕರಿ ನಾಗರ ಹಾವು: ತೆಲಂಗಾಣ ಸಿಎಂ ರೇವಂತ್‌ ವಾಗ್ದಾಳಿ

| Published : Apr 28 2024, 01:15 AM IST / Updated: Apr 28 2024, 05:19 AM IST

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಕರಿ ನಾಗರಹಾವಿದ್ದಂತೆ. ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದ ರೈತ ವಿರೋಧಿ ಕಾನೂನುಗಳನ್ನು ರದ್ದುಗೊಳಿಸಲು ಹೋರಾಟ ಮಾಡಿದ್ದ ರೈತರನ್ನು ಕಚ್ಚಲು ಮರಳಿ ಬರುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ಹೈದರಾಬಾದ್‌: ಪ್ರಧಾನಿ ನರೇಂದ್ರ ಮೋದಿ ಕರಿ ನಾಗರಹಾವಿದ್ದಂತೆ. ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದ ರೈತ ವಿರೋಧಿ ಕಾನೂನುಗಳನ್ನು ರದ್ದುಗೊಳಿಸಲು ಹೋರಾಟ ಮಾಡಿದ್ದ ರೈತರನ್ನು ಕಚ್ಚಲು ಮರಳಿ ಬರುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ಜಹೀರಾಬಾದ್‌ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, 2021ರಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮೂರು ರೈತ ವಿರೋಧಿ ಕಾನೂನುಗಳನ್ನು ರದ್ದು ಗೊಳಿಸುವಂತೆ ಸಾವಿರಾರು ರೈತರು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಆದರೆ ಮೋದಿ ಅದ್ಯಾವುದೂ ಮಾಡದೇ ರೈತರ ವಿರುದ್ಧ ಕರಿ ನಾಗರಹಾವಿನಂತೆ ಹಗೆ ಸಾಧಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರನ್ನು ಕಾರ್ಪೋರೇಟ್‌ ಕಂಪನಿಗಳ ಗುಲಾಮರನ್ನಾಗಿ ಮಾಡಲು ಮೋದಿ 400 ಸೀಟುಗಳನ್ನು ಬಯಸುತ್ತಿದ್ದಾರೆ ಎಂದು ಆರೋಪಿಸಿದರು.