ಇಂಡಿಯಾ ಕೂಟ ಗೆದ್ದರೆ ರಾಮಮಂದಿರ ಶುದ್ಧೀಕರಣ: ಪಟೋಲೆ

| Published : May 11 2024, 12:00 AM IST / Updated: May 11 2024, 05:18 AM IST

ಇಂಡಿಯಾ ಕೂಟ ಗೆದ್ದರೆ ರಾಮಮಂದಿರ ಶುದ್ಧೀಕರಣ: ಪಟೋಲೆ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮ ಮಂದಿರವನ್ನು ಉತ್ತರಾಖಂಡದ ಜ್ಯೋತಿರ್ಮಠದ ಶಂಕರಾಚಾರ್ಯರಿಂದ ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮ ಮಂದಿರವನ್ನು ಉತ್ತರಾಖಂಡದ ಜ್ಯೋತಿರ್ಮಠದ ಶಂಕರಾಚಾರ್ಯರಿಂದ ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಮಾವೇಶದಲ್ಲಿ ಮಾತನಾಡಿದ ಅವರು, ‘ರಾಮಲಲ್ಲಾ ಪ್ರತಿಷ್ಠಾಪನೆ ಸಂದರ್ಭದಲ್ಲಿ ಶಂಕರಾಚಾರ್ಯರನ್ನು ದೂರವಿಟ್ಟು, ಕಾರ್ಯಕ್ರಮವನ್ನು ಮಾಡಿದ್ದಾರೆ. ರಾಮಮಂದಿರ ನಿರ್ಮಾಣದ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಿಷ್ಟಾಚಾರಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹಿಂದೂ ಧರ್ಮದ ಪ್ರಕಾರ ಪ್ರಾಣಪ್ರತಿಷ್ಠೆ ನಡೆದಿಲ್ಲ’ ಎಂದು ಆರೋಪಿಸಿದರು.

ಅಲ್ಲಿ ರಾಮನ ದರ್ಬಾರ್ ನಿರ್ಮಾಣ ಮಾಡುವ ಬದಲು ಬಾಲರಾಮನನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಇದನ್ನು ನಾವು ಅಧಿಕಾರಕ್ಕೆ ಬಂದನಂತರ ಸರಿಪಡಿಸುತ್ತೇವೆ. ಶಂಕರಾಚಾರ್ಯರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ರಾಮನ ದರ್ಬಾರ್‌ ನಿರ್ಮಿಸುತ್ತೇವೆ ಎಂದು ಹೇಳಿದರು.