ಹಳೇಬೀಡಲ್ಲಿ ವೀರಶೈವ ಲಿಂಗಾಯತ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಭೆ

| Published : Apr 25 2024, 01:02 AM IST

ಹಳೇಬೀಡಲ್ಲಿ ವೀರಶೈವ ಲಿಂಗಾಯತ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಭೆ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾನೈಟ್ ರಾಜಶೇಖರ್ ನೇತೃತ್ವದಲ್ಲಿ ಹಳೇಬೀಡಿನ ಚನ್ನಮ್ಮ ನಂಜೇಗೌಡ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಅಸಂಖ್ಯಾತ ಕೈ ಕಾರ್ಯಕರ್ತರು ಹಾಜರಿದ್ದು, ಸಮಾವೇಶವನ್ನು ಅದ್ಧೂರಿಯಾಗಿ ನಡೆಸಲಾಯಿತು.

ಸಮಾವೇಶ । ಕಾಂಗ್ರೆಸ್ ಮುಖಂಡ ಗ್ರಾನೈಟ್ ರಾಜಶೇಖರ್ ನೇತೃತ್ವ । ಪಕ್ಷದ ಅಸಂಖ್ಯಾತ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿ

ಕನ್ನಡಪ್ರಭ ವಾರ್ತೆ ಹಳೇಬೀಡು

ಹೋಬಳಿ ಕೇಂದ್ರದಲ್ಲಿ ವೀರಶೈವ ಲಿಂಗಾಯತ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಕಾಂಗ್ರೆಸ್ ಮುಖಂಡ ಹಾಗೂ ಪುಷ್ಪಗಿರಿ ಮಹಾಸಂಸ್ಥಾನದ ಕಾರ್ಯದರ್ಶಿ ಗ್ರಾನೈಟ್ ರಾಜಶೇಖರ್ ನೇತೃತ್ವದಲ್ಲಿ ಚನ್ನಮ್ಮ ನಂಜೇಗೌಡ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಅಸಂಖ್ಯಾತ ಕೈ ಕಾರ್ಯಕರ್ತರು ಹಾಜರಿದ್ದು, ಸಮಾವೇಶವನ್ನು ಅದ್ಧೂರಿಯಾಗಿ ನಡೆಸಲಾಯಿತು.

ಮಾಜಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ ಕುಲಕರ್ಣಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಆಧಾರಸ್ತಂಭವೇ ವೀರಶೈವ ಲಿಂಗಾಯತರು. ಇಂದಿಗೂ ಪಕ್ಷ ಈ ಸಮುದಾಯವನ್ನು ಗೌರವದಿಂದ ಕಂಡಿದೆ. ಉಳಿದ ಪಕ್ಷಗಳು ಯಾವ ರೀತಿಯಲ್ಲಿ ಗೌರವ ನೀಡಿದ್ದಾರೆ ಎಂದು ಇಡೀ ಸಮಾಜವೇ ನೋಡಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ನೀಡಿದ ಐದು ಗ್ಯಾರಂಟಿ ಯೋಜನೆ ಇಡೀ ದೇಶದಲ್ಲಿ ಪ್ರತಿಧ್ವನಿಸಿದ ಬಳಿಕ ಮೋದಿ ಗ್ಯಾರಂಟಿ ದೇಶದಲ್ಲಿ ಬಂದಿದೆ. ಬಿಜೆಪಿ ಮತ್ತು ಜೆಡಿಎಸ್ ಜನತೆ ತಕ್ಕ ಉತ್ತರ ನೀಡಬೇಕಿದೆ ಎಂದು ಹೇಳಿದರು.

ಗ್ರಾನೈಟ್ ರಾಜಶೇಖರ್ ಮಾತನಾಡಿ, ‘ಸ್ವಾತಂತ್ರ್ಯ ಬಂದ ದಿನದಿಂದಲೇ ವೀರಶೈವ ಲಿಂಗಾಯತ ಸಮುದಾಯದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ತನ್ನದೆಯಾದ ಕೊಡುಗೆ ನೀಡಿದೆ. ಹಾಸನ ಜಿಲ್ಲೆಯಲ್ಲಿ ವೀರಶೈವ ಲಿಂಗಾಯತ ಧರ್ಮದವರು ಕೇವಲ ಓಟ್ ಬ್ಯಾಂಕಿಗೆ ಸೀಮಿತ ಮಾಡಿಕೊಂಡು ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಎಂಬ ರೀತಿಯಲ್ಲಿ ನಮ್ಮ ಜನಾಂಗದ ಸ್ಥಿತಿ ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ನೀಡಿದ ಜನ ಕಲ್ಯಾಣ ಗ್ಯಾರಂಟಿ ಯೋಜನೆಗಳಿಂದ ಬಹುತೇಕ ಕುಟುಂಬಗಳು ಇಂದು ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಈ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಸಂಪೂರ್ಣ ಬೆಂಬಲ ಇರಲಿ ಎಂದರು.

ಹಾಸನ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಮಾತನಾಡಿ, ‘ಕಳೆದ ನಾಲ್ಕು ದಶಕದಿಂದ ಜಿಲ್ಲೆಯಲ್ಲಿ ಒಂದೇ ಕುಟುಂಬಕ್ಕೆ ಪ್ರಧಾನಿ, ಮುಖ್ಯಮಂತ್ರಿ, ಶಾಸಕರು, ಲೋಕಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ರಾಜಕೀಯ ಎಲ್ಲಾ ಅಧಿಕಾರ ಹುದ್ದೆಯನ್ನು ಅನುಭವಿಸಿದ್ದಾರೆ. ಸದಾ ಸೋಲಿನಲ್ಲಿ ಈ ಜಿಲ್ಲೆಯಲ್ಲಿ ಜೆಡಿಎಸ್ ವಿರುದ್ಧ ಹೋರಾಟ ಮಾಡಿದ್ದು, ದಯವಿಟ್ಟು ನಮಗೆ ಒಂದು ಬಾರಿ ಆರ್ಶಿವಾದ ಮಾಡಿ’ ಎಂದು ಮನವಿ ಮಾಡಿದರು.

ಹಾಸನ ಜಿಲ್ಲಾ ಅಧ್ಯಕ್ಷ ಇ.ಎಚ್.ಲಕ್ಷ್ಮಣ್, ರಾಜ್ಯ ಸಭಾ ಮಾಜಿ ಅಧ್ಯಕ್ಷ ಎಚ್.ಕೆ.ಜವರೇಗೌಡ, ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಾವಗಲ್ ಮಂಜುನಾಥ, ಬಿ.ಎಲ್.ಧರ್ಮೇಗೌಡ, ಕಾಂಗ್ರೆಸ್ ಮುಖಂಡರಾದ ಕಾಂಗ್ರೆಸ್ ಯುವ ಅಧ್ಯಕ್ಷ ಧರ್ಶನ್, ಕಾಂಗ್ರೆಸ್ ಮುಖಂಡ ವೈ.ಎನ್.ಕೃಷ್ಣೇಗೌಡ, ಗಂಗಾಧರ, ಹರೀಶ್, ಪಾಪಣ್ಣ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ವಿಜಯಕುಮಾರ್, ಬೇಲೂರು ಪುರಸಭಾ ಮಾಜಿ ಉಪಾಧ್ಯಕ್ಷ ಅರುಣ್ ಕುಮಾರ್, ಬೇಲೂರು ತಾಲೂಕು ವೀರಶೈವ ಮಹಾಸಭಾ ಯುವ ಘಟಕದ ಅಧ್ಯಕ್ಷ ಗೆಂಡೇಹಳ್ಳಿ ಚೇತನ್, ಗೋಬಿ ಕುಮಾರಸ್ವಾಮಿ, ಸುಮ್ಮುಖ ರಾಜು, ಧನ್ ಪಾಲ್, ಸಕಲೇಶಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮತ್ತು ವೀರಶೈವ ಮುಖಂಡ ವಿದ್ಯಾಶಂಕರ್, ವೆಂಕಟೇಶ್.ರಾಯಪುರ ಶಿವಣ್ಣ ಹಾಜರಿದ್ದರು.

ಮಾಜಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ ಕುಲಕರ್ಣಿ ಹಳೇಬೀಡಲ್ಲಿ ಆಯೋಜಿಸಿದ ವೀರಶೈವ ಲಿಂಗಾಯತ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.