ಬಸವ ಜಯಂತಿ ನಾಳೆ ಅದ್ಧೂರಿ ಮೆರವಣಿಗೆಕನ್ನಡಪ್ರಭ ವಾರ್ತೆ ಬಾಗಲಕೋಟೆ: ಬಿವಿವಿ ಸಂಘ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಸಭಾ, ಅಕ್ಕನ ಬಳಗ, ಶಿವಾನುಭವ ಸಮಿತಿ, ಶರಣ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಮೇ 10 ರಂದು ವಿಶ್ವಗುರು ಬಸವ ಜಯಂತಿ ಕಾರ್ಯಕ್ರಮವನ್ನು ಬಾಗಲಕೋಟೆ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಮಾಜಿ ಶಾಸಕ ವೀರಣ್ಣ ಚರಂತಿಮಠ ತಿಳಿಸಿದರು.