ಬಿಸಿಲಿಗೆ ಬೆಂಗಳೂರು ಧಗಧಗ: ಮತ್ತೆ 37.6 ಡಿಗ್ರಿ ಸೆ. ದಾಖಲು

| Published : Apr 25 2024, 02:02 AM IST / Updated: Apr 25 2024, 06:37 AM IST

ಬಿಸಿಲಿಗೆ ಬೆಂಗಳೂರು ಧಗಧಗ: ಮತ್ತೆ 37.6 ಡಿಗ್ರಿ ಸೆ. ದಾಖಲು
Share this Article
  • FB
  • TW
  • Linkdin
  • Email

ಸಾರಾಂಶ

ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದ್ದು, ಮಂಗಳವಾರ ಮತ್ತೆ 37.6 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇದು ಪ್ರಸಕ್ತ ಏಪ್ರಿಲ್‌ ತಿಂಗಳಿನಲ್ಲಿ ದಾಖಲಾದ ಎರಡನೇ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ.

 ಬೆಂಗಳೂರು:ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದ್ದು, ಮಂಗಳವಾರ ಮತ್ತೆ 37.6 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇದು ಪ್ರಸಕ್ತ ಏಪ್ರಿಲ್‌ ತಿಂಗಳಿನಲ್ಲಿ ದಾಖಲಾದ ಎರಡನೇ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ.

ಮಾರ್ಚ್‌ ಕೊನೆಯ ವಾರದಿಂದ ನಗರದ ತಾಪಮಾನ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಏಪ್ರಿಲ್‌ ಮೊದಲ ವಾರದಲ್ಲಿ ಮೊದಲ ಬಾರಿಗೆ 37 ಡಿಗ್ರಿ ಸೆಲ್ಸಿಯಸ್‌ನ ಗಡಿ ದಾಟಿತ್ತು. ಏ.6ರಂದು 37.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಮೂಲಕ ನಗರದಲ್ಲಿ ಎಂಟು ವರ್ಷದ ಏಪ್ರಿಲ್‌ನಲ್ಲಿ ದಾಖಲಾದ ಗರಿಷ್ಠ ಉಷ್ಣಾಂಶವಾಗಿತ್ತು. 

ಬಳಿಕ ಅದೇ ಆಸು ಪಾಸಿನಲ್ಲಿ ಉಷ್ಣಾಂಶ ದಾಖಲಾಗುತ್ತಿತ್ತು. ಏ.19 ರಂದು ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಪ್ರಸಕ್ತ ವರ್ಷದ ಏಪ್ರಿಲ್‌ ನಲ್ಲಿ ದಾಖಲಾದ ಗರಿಷ್ಠ ಉಷ್ಣತೆಯಾಗಿದೆ ಎಂದು ಹವಾಮಾನ ಇಲಾಖೆ ಅಂಕಿ ಅಂಶದಲ್ಲಿ ತಿಳಿಸಲಾಗಿದೆ.2016ರಲ್ಲಿ 39.2 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ಸಾರ್ವಕಾಲಿಕ ದಾಖಲೆಯಾಗಿತ್ತು. ಆ ಬಳಿಕ 2017ರಲ್ಲಿ 37.0, 2018ರಲ್ಲಿ 34.9, 2019ರಲ್ಲಿ 37.0, 2020ರಲ್ಲಿ 36.4, ಹಾಗೂ 2021ರಲ್ಲಿ 37.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ 37.5 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ, ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ 36.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಕಳೆದ ಐದು ದಿನಗಳ ನಗರದ ಗರಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)ದಿನಗರಿಷ್ಠ ಉಷ್ಣಾಂಶ

ಏ.23. 37.6 ಏ.22. 37.2ಏ.2137.4

ಏ.20. 34 ಏ.19. 38