ಲೀಲಾದೇವಿಗೆ ಬಸವಶ್ರೀ, ಅಂಬಯ್ಯ ನುಲಿ ಅವರಿಗೆ ವಚನ ಸಾಹಿತ್ಯ ಪ್ರಶಸ್ತಿ

| Published : May 09 2024, 01:15 AM IST

ಲೀಲಾದೇವಿಗೆ ಬಸವಶ್ರೀ, ಅಂಬಯ್ಯ ನುಲಿ ಅವರಿಗೆ ವಚನ ಸಾಹಿತ್ಯ ಪ್ರಶಸ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಬಸವ ವೇದಿಕೆ ವತಿಯಿಂದ ಕುಮಾರಕೃಪಾ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಮೇ 12ರಂದು ಸಂಜೆ 5.30ಕ್ಕೆ ರಾಜ್ಯಮಟ್ಟದ ಬಸವ ಜಯಂತಿ ಮತ್ತು ಬಸವಶ್ರೀ ಹಾಗೂ ವಚನ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬಸವ ವೇದಿಕೆ ವತಿಯಿಂದ ಕುಮಾರಕೃಪಾ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಮೇ 12ರಂದು ಸಂಜೆ 5.30ಕ್ಕೆ ರಾಜ್ಯಮಟ್ಟದ ಬಸವ ಜಯಂತಿ ಮತ್ತು ಬಸವಶ್ರೀ ಹಾಗೂ ವಚನ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ವೇದಿಕೆ ಅಧ್ಯಕ್ಷ ಡಾ। ಸಿ.ಸೋಮಶೇಖರ್‌, ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ। ನಿರ್ಮಲಾನಂದನಾಥ ಸ್ವಾಮೀಜಿ ವಹಿಸುವರು.

ಈ ಬಾರಿಯ ಬಸವ ಶ್ರೀ ಪ್ರಶಸ್ತಿಯನ್ನು ಶರಣ ಸಾಹಿತ್ಯಕ್ಕೆ ಸಲ್ಲಿಸಿರುವ ಸೇವೆ ಪರಿಗಣಿಸಿ ಮಾಜಿ ಸಚಿವೆ ಡಾ। ಲೀಲಾದೇವಿ ಆರ್‌.ಪ್ರಸಾದ್‌ ಮತ್ತು ವಚನ ಸಾಹಿತ್ಯಶ್ರೀ ಪ್ರಶಸ್ತಿಯನ್ನು ಹಿಂದೂಸ್ತಾನಿ ಗಾಯಕರಾದ ಪಂಡಿತ್ ಅಂಬಯ್ಯ ನುಲಿ ಅವರಿಗೆ ನೀಡಿ ಗೌರವಿಸಲಾಗುವುದು.

ಇಸ್ರೋ ಮಾಜಿ ಅಧ್ಯಕ್ಷ ಡಾ। ಎ.ಎಸ್‌.ಕಿರಣ್‌ಕುಮಾರ್ ಪ್ರಶಸ್ತಿ ಪ್ರದಾನ ಮಾಡಿ, ಬಸವ ಜ್ಯೋತಿ ಮಾಹಿತಿ ಕೈಪಿಡಿ ಬಿಡುಗಡೆ ಮಾಡಲಿದ್ದಾರೆ. ಹೈಕೋರ್ಟ್‌ ವಿಶ್ರಾಂತ ನ್ಯಾ.ರತ್ನಕಲಾ ಅವರು ಅಧ್ಯಕ್ಷತೆ ವಹಿಸುವರು. ಅಂದು ಸಂಜೆ 5ಕ್ಕೆ ಪಂಡಿತ್‌ ಅಂಬಯ್ಯ ನುಲಿ ಅವರಿಂದ ವಚನ ಗಾಯನ ನಡೆಯಲಿದೆ ಎಂದು ಹೇಳಿದರು.