ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೂ ಸ್ಪಂದಿಸಲಿಲ್ಲ ಬಿಜೆಪಿ

| Published : Apr 27 2024, 01:20 AM IST

ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೂ ಸ್ಪಂದಿಸಲಿಲ್ಲ ಬಿಜೆಪಿ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ದೇಶದ ಕೀರ್ತಿ ಹೆಚ್ಚಿಸಿದ್ದ ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದರೂ ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ವಾಗ್ದಾಳಿ ನಡೆಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ದೇಶದ ಕೀರ್ತಿ ಹೆಚ್ಚಿಸಿದ್ದ ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದರೂ ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ವಾಗ್ದಾಳಿ ನಡೆಸಿದರು.

ಬೀಳಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ ಗ್ರಾಮದ ಮಲ್ಲಯ್ಯನ ಐದೇಶಿ ನಿಮಿತ್ತ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ಮಹಿಳಾ ಕುಸ್ತಿಪಟುಗಳು ಹೋರಾಟ ಮಾಡಿದ್ದರೋ ಆ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳದೆ ಅದೇ ವ್ಯಕ್ತಿಯನ್ನು ಚುನಾವಣೆಗೆ ಅಭ್ಯರ್ಥಿಯಾಗಿ ಮಾಡಿದ್ದಾರೆ ಎಂದು ಟೀಕಿಸಿದರು.

ಲೈಂಗಿಕ ದೌರ್ಜನ್ಯಕ್ಕೆ ಬೇಸತ್ತ ಮಹಿಳಾ ಕುಸ್ತಿಪಟುಗಳು ತಾವು ಪಡೆದ ಪದಕಗಳನ್ನು ವಾಪಸ್ ನೀಡಿ ಕಣ್ಣೀರು ಹಾಕಿದರೂ ಕೇಂದ್ರದ ನಾಯಕರ ಮನಸು ಕರಗಲಿಲ್ಲ. ಭಾರತದ ಕೀರ್ತಿ ಹೆಚ್ಚಿಸಿದ ಕ್ರೀಡಾಪಟುಗಳ ಅಳಲನ್ನು ಕೇಳಲಿಲ್ಲ. ಆರೋಪಕ್ಕೆ ಗುರಿಯಾದ ವ್ಯಕ್ತಿ ಮೇಲೆ ಕ್ರಮ ಕೈಗೊಳ್ಳುವ ಬದಲಿಗೆ ಪುರಸ್ಕರಿಸುವ ರೀತಿ ನಡೆದುಕೊಳ್ಳಲಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಮಣಿಪುರ ಹಿಂಸಾಚಾರದ ಬಗ್ಗೆಯೂ ಪ್ರಧಾನಿ ಮಾತನಾಡಲಿಲ್ಲ. ಮಹಿಳೆಯರ ಮೇಲೆ ದೌರ್ಜನ್ಯ ನಡೆದವು. ಹಿಂಸಾಚಾರ ನಡೆಯಿತು. ಆದರೂ ಮಣಿಪುರಕ್ಕೆ ಭೇಟಿ ನೀಡಲಿಲ್ಲ. ಘಟನೆಯ ಬಗ್ಗೆ ತುಟಿ ಬಿಚ್ಚಲಿಲ್ಲ. ಸಂಸತ್ತಿನಲ್ಲಿ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರೂ ಮಾತನಾಡಲಿಲ್ಲ ಎಂದರು.

ಈ ಸಂದರ್ಭದಲ್ಲಿ ಮಹಿಳೆಯರು ಸಂಯುಕ್ತಾ ಪಾಟೀಲ ಅವರಿಗೆ ಉಡಿತುಂಬಿ ಶುಭ ಕೋರಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತ ಕಾಖಂಡಕಿ, ಯುವ ಕಾಂಗ್ರೆಸ್ ಅಧ್ಯಕ್ಷ ಚಿದಾನಂದ ನಂದ್ಯಾಳ ಮತ್ತಿತರರು ಉಪಸ್ಥಿತರಿದ್ದರು.

-------------

----ಕೋಟ್‌----

ಮಹಿಳೆಯರ ಬಗ್ಗೆ ನೈಜ ಕಳಕಳಿ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ. ರಾಜ್ಯದಲ್ಲಿ ಇದೇ ಕಾರಣಕ್ಕೆ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಇನ್ನೂ ಹಲವು ಯೋಜನೆಗಳನ್ನು ಜಾರಿ ಮಾಡುವ ಗ್ಯಾರಂಟಿ ನೀಡಲಾಗಿದೆ.

-ಸಂಯುಕ್ತಾ ಪಾಟೀಲ ಕಾಂಗ್ರೆಸ್‌ ಅಭ್ಯರ್ಥಿ