ಶಿಬರೂರು ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳಿಗೆ ಬ್ರಹ್ಮಕುಂಭಾಭಿಷೇಕ

| Published : Apr 27 2024, 01:16 AM IST

ಶಿಬರೂರು ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳಿಗೆ ಬ್ರಹ್ಮಕುಂಭಾಭಿಷೇಕ
Share this Article
  • FB
  • TW
  • Linkdin
  • Email

ಸಾರಾಂಶ

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಶ್ರೀ ಉಳ್ಳಾಯ ಶ್ರೀ ಕೊಡಮಣಿತ್ತಾಯ ಪರಿವಾರ ದೈವಗಳಿಗೆ ಕ್ಷೇತ್ರದ ತಂತ್ರಿಗಳಾದ ವೇದವ್ಯಾಸ ತಂತ್ರಿ, ಕೃಷ್ಣರಾಜ ತಂತ್ರಿಗಳ ನೇತೃತ್ವದಲ್ಲಿ ಬ್ರಹ್ಮ ಕುಂಭಾಭಿಷೇಕ ನಡೆಯಿತು. ಫಲಿಮಾರು ಮಠಾಧೀಶ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಸಾನಿಧ್ಯ ವಹಿಸಿದ್ದರು. ಕಟೀಲು ಕ್ಷೇತ್ರದ ಆಸ್ರಣ್ಣ ಬಂಧುಗಳಿದ್ದರು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಪ್ರಾತಃಕಾಲ ವಿಶೇಷ ಪ್ರಾರ್ಥನೆ ನಡೆದು ಬೆಳಗ್ಗೆ 10.45ಕ್ಕೆ ಮಿಥುನ ಲಗ್ನ ಸುಮಹೂರ್ತದಲ್ಲಿ ಶ್ರೀ ಉಳ್ಳಾಯ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳಿಗೆ ಸಹಸ್ರ ಕಲಶ ಸಹಿತ ಬ್ರಹ್ಮಕುಂಭಾಭಿಷೇಕ, ಮಹಾಪೂಜೆ, ಶ್ರೀ ನಾಗದೇವರಿಗೆ ಆಶ್ಲೇಷಾ ಬಲಿ, ವಟು ಆರಾಧನೆ, ಮಹಾಪೂಜೆ, ಪಲ್ಲಪೂಜೆ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಉಮೇಶ್ ಎನ್. ಶೆಟ್ಟಿ ಗುತ್ತಿನಾರ್, ಅಧ್ಯಕ್ಷ ಕೋಂಜಾಲಗುತ್ತು ಪ್ರಭಾಕರ ಎಸ್. ಶೆಟ್ಟಿ, ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿವರಾಂ ಸೇರಿಗಾರ ಹಾಗೂ ಧನಂಜಯ ಸೇರಿಗಾರ ಶಿಬರೂರು ಅವರಿಂದ ನಾದಸ್ವರ ವಾದನ, ಮಧ್ಯಾಹ್ನ ಸೌಮ್ಯ ಭಟ್‌ ಕಟೀಲು ಮತ್ತು ಬಳಗದವರಿಂದ ಭಕ್ತಿ ರಸಮಂಜರಿ, ಪಟ್ಲ ಸತೀಶ್‌ ಶೆಟ್ಟಿ, ಬಲಿಪ ಶಿವಶಂಕರ್‌ ಭಟ್‌ ಮತ್ತಿತರ ಕಲಾವಿದರಿಂದ ಯಕ್ಷ-ಗಾನ - ವೈಭವ, ರಾತ್ರಿ ಖ್ಯಾತ ವಯಲಿನ್‌ ವಾದಕ ವಿದ್ವಾನ್‌ ಸಿ.ಎಸ್‌. ಅನುರೂಪ್‌ ತ್ರಿಶ್ಯೂರ್‌ ಹಾಗೂ ಅವರ ಶಿಷ್ಯೆ ಅಂತಾರಾಷ್ಟ್ರೀಯ ಖ್ಯಾತಿಯ ಬಾಲ ಪ್ರತಿಭೆ ಗಂಗಾ ಶಶಿಧರನ್‌ ತ್ರಿಶ್ಯೂರ್‌ ಮತ್ತು ಬಳಗದವರಿಂದ ದ್ವಂದ್ವ ವಯಲಿನ್‌ ವಾದನ ಜರುಗಿತು.