ಬಿಜೆಪಿ 400 ಸೀಟ್ ಗೆದ್ದರೆ ಸಂವಿಧಾನ ಬದಲಾವಣೆ: ಬಿ.ಕೆ. ಹರಿಪ್ರಸಾದ್

| Published : Apr 28 2024, 01:19 AM IST

ಬಿಜೆಪಿ 400 ಸೀಟ್ ಗೆದ್ದರೆ ಸಂವಿಧಾನ ಬದಲಾವಣೆ: ಬಿ.ಕೆ. ಹರಿಪ್ರಸಾದ್
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿಯವರು ಒಂದು ದೇಶ, ಒಂದು ಮತ, ಒಂದು ಚುನಾವಣೆ ಎನ್ನುತ್ತಿದ್ದಾರೆ. ಈ ಮೂಲದ ಸಂವಿಧಾನದ ಆಶಯಕ್ಕೆ ಧಕ್ಕೆ ತರುವ ಹುನ್ನಾರ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.

ಕೊಪ್ಪಳ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ 400 ಸೀಟ್ ಗೆದ್ದರೆ ಬಿಜೆಪಿ ಸಂವಿಧಾನವನ್ನೇ ಬದಲಾವಣೆ ಮಾಡುತ್ತದೆ. ಆದ್ದರಿಂದ ಸಂವಿಧಾನ ರಕ್ಷಣೆಗಾದರೂ ಬಿಜೆಪಿ ಸೋಲಿಸಿ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿಯವರು ಸಂವಿಧಾನ ಮತ್ತು ರಾಷ್ಟ್ರಧ್ವಜ ಒಪ್ಪಿಕೊಂಡಿಲ್ಲ. ಅವರಿಗೆ ಬೇರೆಯದೇ ಚಿಂತನೆ ಇದೆ. ಆದರೆ, ಅದನ್ನು ತೋರ್ಪಡಿಸದೆ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿಯವರು ಒಂದು ದೇಶ, ಒಂದು ಮತ, ಒಂದು ಚುನಾವಣೆ ಎನ್ನುತ್ತಿದ್ದಾರೆ. ಈ ಮೂಲದ ಸಂವಿಧಾನದ ಆಶಯಕ್ಕೆ ಧಕ್ಕೆ ತರುವ ಹುನ್ನಾರ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಏನು ಮಾಡಿದ್ದೇವೆ ಎಂದು ತಮ್ಮ ಪ್ರಣಾಳಿಕೆಯಲ್ಲಿಯೂ ಹೇಳಿಲ್ಲ, ಜನಪರ ಕಾಳಜಿಯ ಒಂದು ಘೋಷಣೆ ಮಾಡಿಲ್ಲ. ಅಷ್ಟೇ ಅಲ್ಲ, ಕಾಂಗ್ರೆಸ್ ಪಂಚ ಘೋಷಣೆ ಮಾಡಿದೆ ಎಂದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ನೀಡಲಿಲ್ಲ. ಆದರೆ, ರಾಜ್ಯ ಸರ್ಕಾರ ಕೋರ್ಟ್ ಮೆಟ್ಟಿಲು ಏರಿದ್ದರಿಂದ ಬರ ಪರಿಹಾರ ಬಂದಿದೆ. ಆದರೂ ಅದನ್ನು ಕೇಳಿದ್ದಷ್ಟು ಕೊಟ್ಟಿಲ್ಲ ಎಂದು ಕಿಡಿಕಾರಿದರು. ರೈತರು, ಬಡವರ ಸಾಲ ಮನ್ನಾ ಮಾಡದ ಕೇಂದ್ರ ಕಾರ್ಪೊರೇಟ್‌ಗಳ ಸಾಲಮನ್ನಾ ಮಾಡುತ್ತದೆ. ಅದರಲ್ಲಿ ಶೇ. 25ರಷ್ಟು ನೀಡಿದರೂ ರೈತರ ಸಾಲಮನ್ನಾ ಮಾಡಬಹುದಾಗಿದೆ. ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್ ಅನ್ಯಾಯ ಮಾಡಿಲ್ಲ. ಆದರೆ, ಮೀಸಲಾತಿಯನ್ನು ಪ್ರಶ್ನೆ ಮಾಡಿ, ಬಿಜೆಪಿ ರಾಮ ಜೋಯೀಸ್ ಅವರು ಕೋರ್ಟ್ ಮೆಟ್ಟಿಲು ಏರಿದ್ದು ಜನ ಮರೆತಿಲ್ಲ.

ದೇಶದಲ್ಲಿ ಹಿಂದೂ ಮತ್ತು ಮುಸ್ಲಿ ಧರ್ಮಗಳು ಅಪಾಯದಲ್ಲಿಲ್ಲ. ಆರ್‌ಎಸ್‌ಎಸ್‌ನಲ್ಲಿ ಯಾವ ದಲಿತರಿಗೆ ಅವಕಾಶ ಇದೆ ಹೇಳಿ ಎಂದು ಪ್ರಶ್ನೆ ಮಾಡಿದರು.

ಅಭ್ಯರ್ಥಿ ರಾಜಶೇಖರ ಹಿಟ್ನಾಳ, ಎಸ್.ಬಿ. ನಾಗರಳ್ಳಿ, ಎಚ್.ಎನ್. ಬಡಿಗೇರ, ಜುಲ್ಲು ಖಾದ್ರಿ, ಕೃಷ್ಣ ಇಟ್ಟಂಗಿ ಇದ್ದರು.