ದಾವಣಗೆರೆ, ಹಾವೇರಿ ಅಭ್ಯರ್ಥಿಗಳ ಪರ ಮೋದಿ ಪ್ರಚಾರ: ಜಿ.ಎಂ.ಸಿದ್ದೇಶ್ವರ

| Published : Apr 28 2024, 01:15 AM IST

ದಾವಣಗೆರೆ, ಹಾವೇರಿ ಅಭ್ಯರ್ಥಿಗಳ ಪರ ಮೋದಿ ಪ್ರಚಾರ: ಜಿ.ಎಂ.ಸಿದ್ದೇಶ್ವರ
Share this Article
  • FB
  • TW
  • Linkdin
  • Email

ಸಾರಾಂಶ

ದಾವಣಗೆರೆಯಲ್ಲಿ ಏ.28ರ ಪ್ರಧಾನಿ ನರೇಂದ್ರ ಮೋದಿ ಸಮಾವೇಶದ ಬಗ್ಗೆ ಸಂಸದ ಜಿ.ಎಂ.ಸಿದ್ದೇಶ್ವರ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ವಿಕಸಿತ ಭಾರತ ವಿಜಯ ಸಂಕಲ್ಪ ಸಮಾವೇಶ ಉದ್ಘಾಟಿಸಿ, ಬಿಜೆಪಿ ಪರ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಏ.28ರಂದು ನಗರಕ್ಕೆ ಆಗಮಿಸುವ ಹಿನ್ನೆಲೆ ಸಂಸದ ಜಿ.ಎಂ.ಸಿದ್ದೇಶ್ವರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಶನಿವಾರ ಸಂಜೆ ಅಂತಿಮ ಸಿದ್ಧತೆ ಪರಿಶೀಲಿಸಿದರು.

ನಗರದ ಹೈಸ್ಕೂಲ್ ಮೈದಾನದಲ್ಲಿ ಸಮಾವೇಶದ ವೇದಿಕೆ, ಪೆಂಡಾಲ್, ಆಸನಗಳು, ಎಲ್‌ಇಡಿ, ಧ್ವನಿವರ್ಧಕ ಹೀಗೆ ಎಲ್ಲಾ ಅಂತಿಮ ಸಿದ್ಧತೆ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಸಿದ್ದೇಶ್ವರ, ಏ.28ರ ಮಧ್ಯಾಹ್ನ 1ಕ್ಕೆ ಸಮಾವೇಶ ಆರಂಭವಾಗಲಿದೆ ಎಂದರು.

ಸಮಾವೇಶದಲ್ಲಿ ದಾವಣಗೆರೆ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಹಾವೇರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಧಾನಿ ನರೇಂದ್ರ ಮೋದಿ ಮತಯಾಚಿಸಲಿದ್ದಾರೆ. ಪ್ರಧಾನಿ ಮೋದಿಯವರಿದೆ ದಾವಣಗೆರೆ ಪ್ರಿಯವಾದ ಊರುಗಳಲ್ಲಿ ಒಂದಾಗಿದೆ. ಇದೀಗ 5ನೇ ಬಾರಿಗೆ ಮೋದಿ ಇಲ್ಲಿಗೆ ಆಗಮಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಮಧ್ಯ ಕರ್ನಾಟಕದ ಜನತೆ ಸಹ ನರೇಂದ್ರ ಮೋದಿಯವರನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಮೂರನೇ ಬಾರಿಗೆ ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಿ ಮಾಡಲು ಜನರು ತುದಿಗಾಲ ಮೇಲಿದ್ದಾರೆ. ದಾವಣಗೆರೆ ಕ್ಷೇತ್ರದಿಂದ ಗಾಯತ್ರಿ ಸಿದ್ದೇಶ್ವರರಿಗೆ ಹೆಚ್ಚು ಮತ ನೀಡುವ ಮೂಲಕ ದಾಖಲೆಯ ಗೆಲುವನ್ನು ಜನ ನೀಡಲಿದ್ದಾರೆ ಎಂದು ತಿಳಿಸಿದರು.

ಪ್ರಧಾನಿ ಮೋದಿ ಜೊತೆಗೆವೇದಿಕೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಅಭ್ಯರ್ಥಿಗಳಾದ ಗಾಯತ್ರಿ ಸಿದ್ದೇಶ್ವರ, ಬಸವರಾಜ ಬೊಮ್ಮಾಯಿ, ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ, ವಿಧಾನ ಪರಿಷತ್‌ನ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ, ದಾವಣಗೆರೆ ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ, ಎಂ.ಪಿ.ರೇಣುಕಾಚಾರ್ಯ, ಜಿ.ಕರುಣಾಕರ ರೆಡ್ಡಿ, ಶಾಸಕ ಬಿ.ಪಿ.ಹರೀಶ, ಮಾಜಿ ಶಾಸಕರಾದ ಮಾಡಾಳ್ ವಿರುಪಾಕ್ಷಪ್ಪ, ಎಸ್.ವಿ.ರಾಮಚಂದ್ರ, ಎಚ್.ಪಿ.ರಾಜೇಶ, ಜೆಡಿಎಸ್ ಮುಖಂಡರಾದಮಾಜಿ ಶಾಸಕ ಎಚ್.ಎಸ್.ಶಿವಶಂಕರ, ತಾವು ಸೇರಿದಂತೆ ಅನೇಕರು ವೇದಿಕೆಯಲ್ಲಿರುತ್ತೇವೆ ಎಂದು ಮಾಹಿತಿ ನೀಡಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರುಗೇಶ ನಿರಾಣಿ, ವಿಪ ಸದಸ್ಯ ನವೀನ, ಯುವ ಮುಖಂಡರಾದ ಜಿ.ಎಸ್.ಅನಿತಕುಮಾರ, ಮುರುಗೇಶ ಆರಾಧ್ಯ, ಪಿ.ಸಿ.ಶ್ರೀನಿವಾಸ ಭಟ್, ಅನಿಲ್‌ಕುಮಾರ ನಾಯ್ಕ, ಐರಣಿ ಅಣ್ಣೇಶ, ಆರ್.ಎಲ್.ಶಿವಪ್ರಕಾಶ, ಎಸ್.ಟಿ.ಯೋಗೇಶ್ವರ ಇತರರು ಇದ್ದರು.