ಹಿರಿಯರು ಮನೆಯಲ್ಲೇ ಕುಳಿತು ಮತದಾನ ಮಾಡಿ: ಮುಂಡರಗಿ

| Published : Apr 28 2024, 01:23 AM IST

ಹಿರಿಯರು ಮನೆಯಲ್ಲೇ ಕುಳಿತು ಮತದಾನ ಮಾಡಿ: ಮುಂಡರಗಿ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ: 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಚುನಾವಣಾ ಆಯೋಗ ಮನೆಯಲ್ಲಿಯೇ ಕುಳಿತು ಮತದಾನ ಮಾಡಲು ಮಹತ್ತರ ಅವಕಾಶವನ್ನು ಕಲ್ಪಿಸಿದೆ. ಆದ್ದರಿಂದ ಯಾವುದೇ ತೊಂದರೆಗೆ ಒಳಗಾಗದೇ ಮನೆಯಲ್ಲಿಯೇ ಇದ್ದು ಮತದಾನ ಮಾಡಬಹುದು ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಸಿ.ಆರ್. ಮುಂಡರಗಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ:

85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಚುನಾವಣಾ ಆಯೋಗ ಮನೆಯಲ್ಲಿಯೇ ಕುಳಿತು ಮತದಾನ ಮಾಡಲು ಮಹತ್ತರ ಅವಕಾಶವನ್ನು ಕಲ್ಪಿಸಿದೆ. ಆದ್ದರಿಂದ ಯಾವುದೇ ತೊಂದರೆಗೆ ಒಳಗಾಗದೇ ಮನೆಯಲ್ಲಿಯೇ ಇದ್ದು ಮತದಾನ ಮಾಡಬಹುದು ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಸಿ.ಆರ್. ಮುಂಡರಗಿ ಹೇಳಿದರು.ವಿಜಯಪುರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಗ್ಯಾಂಗ್ ಬಾವಡಿ ಹಾಗೂ ಎಪಿಎಂಸಿ ಹತ್ತಿರ ಅಕ್ಕಮಹಾದೇವಿ ರೋಡ್ ವ್ಯಾಪ್ತಿಗಳಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಮನೆಗಳಿಗೆ ತೆರಳಿ ಮನೆಯಲ್ಲಿಯೇ ಮತದಾನ ಮಾಡುವಂತೆ ಮನವಿ ಮಾಡಿದರು. ಮನೆಗಳ ಗೋಡೆಗಳ ಮೇಲೆ ಪೋಸ್ಟರ್ ಗಳನ್ನು ಅಂಟಿಸಿ ಮತದಾನ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು. 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರ ಮನೆಯ ಬಾಗಿಲಿಗೆ ಅಧಿಕಾರಿಗಳ ತಂಡ ಮತದಾನ ಪ್ರಕ್ರಿಯೆಗೆ ಆಗಮಿಸಲಿದ್ದಾರೆ. ಏ.27ರಿಂದ ಏ.29ರ ವರೆಗೆ ಮೂರು ದಿನಗಳ ಕಾಲ ನಡೆಯಲಿದೆ. ಕಡ್ಡಾಯವಾಗಿ ಮತದಾನ ಮಾಡುವಂತೆ ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಲ್ಲಿ ವಿನಂತಿಸಿದರು.ಇದೇ ವೇಳೆ ಹಿರಿಯ ನಾಗರಿಕರು, ವಿಶೇಷ ಚೇತನರಿಗೆ ಜಿಲ್ಲಾ ಸ್ವೀಪ್ ಸಮಿತಿಯಿಂದ ಅಭಿನಂದನಾ ಪತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ, ಜಿಪಂ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ.ಬಿ.ಅಲ್ಲಾಪೂರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಹಾಗೂ ಜಿಪ ಸಿಬ್ಬಂದಿ ಉಪಸ್ಥಿತರಿದ್ದರು.