ವಿಜಯವಿಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳ ಸಾಧನೆ

| Published : May 10 2024, 01:32 AM IST

ಸಾರಾಂಶ

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 151 ವಿದ್ಯಾರ್ಥಿಗಳಲ್ಲಿ 78 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಪ್ರಥಮ ಭಾಷೆಯಲ್ಲಿ 125 ಕ್ಕೆ 125 ಅಂಕಗಳನ್ನು ಮತ್ತು ಸಂಸ್ಕೃತ ವಿಷಯದಲ್ಲಿ 14 ವಿದ್ಯಾರ್ಥಿಗಳು, ದ್ವಿತೀಯ ಭಾಷೆ ಇಂಗ್ಲಿಷ್ ನಲ್ಲಿ 6 ವಿದ್ಯಾರ್ಥಿಗಳು, ತೃತೀಯ ಭಾಷೆ ಕನ್ನಡ ಮತ್ತು ಹಿಂದಿಯಲ್ಲಿ 16 ವಿದ್ಯಾರ್ಥಿಗಳು, ಗಣಿತ ವಿಷಯದಲ್ಲಿ 2 ವಿದ್ಯಾರ್ಥಿಗಳು, ವಿಜ್ಞಾನ ವಿಷಯದಲ್ಲಿ 2 ವಿದ್ಯಾರ್ಥಿಗಳು, ಸಮಾಜ ವಿಜ್ಞಾನ ವಿಷಯದಲ್ಲಿ 5 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ.

ಕನ್ನಡಪ್ರಭ ವಾರ್ತೆ ಮೈಸೂರು

ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಗರದ ವಿಜಯವಿಠಲ ವಿದ್ಯಾಶಾಲೆಗೆ

ಉತ್ತಮ ಫಲಿತಾಂಶ ಲಭಿಸಿದ್ದು, ವಿದ್ಯಾರ್ಥಿ ಪ್ರಥಮ್ ಎಸ್. ಭಾರಧ್ವಾಜ್ 625 ಕ್ಕೆ 622 ಅಂಕಗಳನ್ನು ತೆಗೆಯುವ ಮೂಲಕ ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ವಿದ್ಯಾರ್ಥಿ ಸುದೀಪ್ತ 621 ಅಂಕ ಪಡೆದು ಜಿಲ್ಲೆಗೆ ತೃತೀಯ ಸ್ಥಾನ, ಎಂ.ಡಿ. ಸುದೀಕ್ಷಾ- 620 ಅಂಕಗಳನ್ನು ಪಡೆದು ಜಿಲ್ಲೆಗೆ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಶಾಲೆಯ ಕಿರೀಟವನ್ನು ಉನ್ನತ ಶಿಖರಕ್ಕೇರಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 151 ವಿದ್ಯಾರ್ಥಿಗಳಲ್ಲಿ 78 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಪ್ರಥಮ ಭಾಷೆಯಲ್ಲಿ 125 ಕ್ಕೆ 125 ಅಂಕಗಳನ್ನು ಮತ್ತು ಸಂಸ್ಕೃತ ವಿಷಯದಲ್ಲಿ 14 ವಿದ್ಯಾರ್ಥಿಗಳು, ದ್ವಿತೀಯ ಭಾಷೆ ಇಂಗ್ಲಿಷ್ ನಲ್ಲಿ 6 ವಿದ್ಯಾರ್ಥಿಗಳು, ತೃತೀಯ ಭಾಷೆ ಕನ್ನಡ ಮತ್ತು ಹಿಂದಿಯಲ್ಲಿ 16 ವಿದ್ಯಾರ್ಥಿಗಳು, ಗಣಿತ ವಿಷಯದಲ್ಲಿ 2 ವಿದ್ಯಾರ್ಥಿಗಳು, ವಿಜ್ಞಾನ ವಿಷಯದಲ್ಲಿ 2 ವಿದ್ಯಾರ್ಥಿಗಳು, ಸಮಾಜ ವಿಜ್ಞಾನ ವಿಷಯದಲ್ಲಿ 5 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಯನ್ನು ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಮುಖ್ಯಶಿಕ್ಷಕರು, ಪೋಷಕರು, ಶಿಕ್ಷಕರು, ಸಿಬ್ಬಂದಿ ವರ್ಗ ಪ್ರಶಂಸಿಸಿದ್ದಾರೆ.