ಎಚ್ಡಿಕೆ ಕನಿಷ್ಠ 1 ಲಕ್ಷ ಮತಗಳ ಅಂತರದಲ್ಲಿ ಗೆಲುವು: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ

| Published : Apr 27 2024, 01:16 AM IST / Updated: Apr 27 2024, 01:31 PM IST

ಎಚ್ಡಿಕೆ ಕನಿಷ್ಠ 1 ಲಕ್ಷ ಮತಗಳ ಅಂತರದಲ್ಲಿ ಗೆಲುವು: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಜಿಲ್ಲೆಯಿಂದ ಸ್ಪರ್ಧಿಸಿದರೆ ಹಬ್ಬದ ವಾತಾವರಣೆ ಸೃಷ್ಠಿಯಾಗಲಿದೆ ಎಂದಿದ್ದೆ. ಅದೇ ರೀತಿ ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ಸೃಷ್ಠಿಯಾಗಿದೆ.  

  ಶ್ರೀರಂಗಪಟ್ಟಣ :  ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ 1 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ಅರಕೆರೆ ಗ್ರಾಮದಲ್ಲಿ ಪತ್ನಿ ಗೀತಾ ರವೀಂದ್ರ ಅವರೊಂದಿಗೆ ಆಗಮಿಸಿಮತ ಚಲಾಯಿಸಿದ ನಂತರ ಮಾತನಾಡಿ, ಜಿಲ್ಲಾದ್ಯಂತ ಸುಡು ಬಿಸಿಲಿನಲ್ಲೂ ಮಧ್ಯಾಹ್ನ 12 ಗಂಟೆ ವೇಳೆಗೆ ಸುಮಾರು ಶೇ.48 ರಷ್ಟು ಮತದಾನವಾಗುತ್ತಿರುವುದು ಪ್ರಜಾಪ್ರಭುತ್ವದ ಹೆಗ್ಗಳಿಕೆ ಕಾರಣವಾಗಿದೆ ಎಂದರು.

ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಜಿಲ್ಲೆಯಿಂದ ಸ್ಪರ್ಧಿಸಿದರೆ ಹಬ್ಬದ ವಾತಾವರಣೆ ಸೃಷ್ಠಿಯಾಗಲಿದೆ ಎಂದಿದ್ದೆ. ಅದೇ ರೀತಿ ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ಸೃಷ್ಠಿಯಾಗಿದೆ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಕೇವಲ ಒಂದು ಕ್ಷೇತ್ರವಲ್ಲದೆ ಜಿಲ್ಲೆಯಾದ್ಯಂತ ಪೂರಕವಾದ ವಾತಾವರವಿದೆ ಎಂದು ಹೇಳಿದರು.

ಪಕ್ಷಾತೀತವಾಗಿ ಪ್ರತಿಯೊಬ್ಬರು ಮುಂದೆ ನಿಂತು ಈ ಚುನಾವಣೆ ಮಾಡುತ್ತಿರುವುದು ಖುಷಿಯಾಗಿದೆ. ಹಾಗಾಗಿ ಅವರು ಬಹಳ ದೊಡ್ಡ ಅಂತರದಲ್ಲಿ ಅಂದರೆ ಕನಿಷ್ಠ 1 ಲಕ್ಷಕ್ಕೂ ಅಧಿಕ ಮತಗಳಿಂದ ಎಚ್ .ಡಿ.ಕುಮಾರಸ್ವಾಮಿ ಅವರು ಜಯಗಳಿಸಲಿದ್ದಾರೆ ಎಂದರು.

  ಎಚ್.ಡಿ.ಕುಮಾರಸ್ವಾಮಿಗೆ ಗೆಲುವು:

  ಪಾಂಡವಪುರ : ಲೋಕಸಭಾ ಚುನಾವಣೆಯಂತಹ ದೊಡ್ಡ ಹಬ್ಬದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.

ತಾಲೂಕಿನ ಚಿನಕುರುಳಿಯಲ್ಲಿ ಮತದಾನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಲೋಕಸಭಾ ಚುನಾವಣೆ ದೊಡ್ಡಹಬ್ಬವಾಗಿದೆ. ಮತದಾನ ಮಾಡುವ ಮೂಲಕ ಮತದಾರರು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದಾರೆ. ಮಂಡ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಗೆಲುವು ದಾಖಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ನೀಡಿರುವ ಜನಪರ ಕಾರ್ಯಕ್ರಮಗಳು ಕುಮಾರಸ್ವಾಮಿ ಅವರ ಕೈಹಿಡಿಯಲಿದ್ದಾರೆ ಎಂದರು.