ಗಡಿಯಲ್ಲಿ ಹೆಚ್ಚಿನ ನಿಗಾವಹಿಸಲು ಐಜಿಪಿ ಸೂಚನೆ

| Published : Apr 19 2024, 01:03 AM IST

ಗಡಿಯಲ್ಲಿ ಹೆಚ್ಚಿನ ನಿಗಾವಹಿಸಲು ಐಜಿಪಿ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯ ಹಿನ್ನೆಲೆಯಲ್ಲಿ ಚುನಾವಣೆ ಅಕ್ರಮಗಳನ್ನು ತಡೆಯಲು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಗಡಿ ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಉತ್ತರ ವಲಯ ಐಜಿಪಿ ವಿಕಾಸ್ ಕುಮಾರ್ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯ ಹಿನ್ನೆಲೆಯಲ್ಲಿ ಚುನಾವಣೆ ಅಕ್ರಮಗಳನ್ನು ತಡೆಯಲು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಗಡಿ ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಉತ್ತರ ವಲಯ ಐಜಿಪಿ ವಿಕಾಸ್ ಕುಮಾರ್ ಸೂಚಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಗೋವಾ, ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಜಿಲ್ಲೆಗಳ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಸಭೆಯಲ್ಲಿ ಬೆಳಗಾವಿ ಉತ್ತರ ವಲಯ ವ್ಯಾಪ್ತಿಯ ಗಡಿಗೆ ಹೊಂದಿಕೊಂಡಿರುವ ಗೋವಾ ಹಾಗೂ ಮಹಾರಾಷ್ಟ್ರದ ಕೆಲವು ಜಿಲ್ಲೆಗಳಗೆ ಆಗಮಿಸುವ ಹಾಗೂ ನಿರ್ಗಮಿಸುವ ವಾಹನಗಳನ್ನು ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ ನಡೆಸಬೇಕು. ಅಕ್ರಮ ಮದ್ಯ ಸಾಗಣೆ, ಚುನಾವಣೆ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಹೆಚ್ಚಿನ ನಿಗಾವಹಿಸುವ ಕುರಿತು ಚರ್ಚಿಸಲಾಯಿತು. ಸಾಂಗಲಿ ಮತ್ತು ಜಿಲ್ಲೆಗಳ ಪೊಲೀಸ್ ಅಧಿಕಾರಿಗಳು ಜ್ಯೂಮ್‌ ಮೂಲಕ ಸಭೆಗೆ ಹಾಜರಾಗಿದ್ದರು.

ಸಭೆಯಲ್ಲಿ ಐಜಿಪಿ ವಿಕಾಸ್ ಕುಮಾರ್ , ಕೊಲ್ಲಾಪುರ ಐಜಿಪಿ ಸುನಿಲ್ ಫುಲಾರಿ , ಗೋವಾ ಐಜಿಪಿ ಓಂವೀರ್ ಸಿಂಗ್, ಬೆಳಗಾವಿ ನಗರ ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್‌, ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ವಿಜಯಪುರ ಎಸ್ಪಿ ರಿಷಿಕೇಶ ಸೋನವಾನೆ ,ಕೊಲ್ಲಾಪುರ ಎಸ್.ಪಿ. ಮಹೇಂದ್ರ ಪಂಡಿತ್, ಡಿಸಿಪಿ ರೋಹನ್ ಜಗದೀಶ್ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.