ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಬೋರ್ವೆಲ್‌ ಕೊರೆಸಲು ಸೂಚನೆ

| Published : May 10 2024, 11:50 PM IST

ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಬೋರ್ವೆಲ್‌ ಕೊರೆಸಲು ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಕಡೂರು, ಬರಪೀಡಿತ ಕಡೂರು ತಾಲೂಕಿನ ಗ್ರಾಮೀಣ ಭಾಗದ 31 ಗ್ರಾಮಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಆ ಗ್ರಾಮಗಳಲ್ಲಿ ತುರ್ತಾಗಿ ಬೊರ್‍ವೆಲ್ ಕೊರೆಸಲು ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ತರೀಕೆರೆ ಉಪ ವಿಭಾಗಾಧಿಕಾರಿ ಕಾಂತರಾಜ್ ಸೂಚಿಸಿದರು

- ಪಟ್ಟಣದ ತಾಪಂನಲ್ಲಿ ಕುಡಿಯುವ ನೀರು ನಿರ್ವಹಣೆಗೆ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಕಾಂತರಾಜ್‌

ಕನ್ನಡಪ್ರಭ ವಾರ್ತೆ, ಕಡೂರು

ಬರಪೀಡಿತ ಕಡೂರು ತಾಲೂಕಿನ ಗ್ರಾಮೀಣ ಭಾಗದ 31 ಗ್ರಾಮಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಆ ಗ್ರಾಮಗಳಲ್ಲಿ ತುರ್ತಾಗಿ ಬೊರ್‍ವೆಲ್ ಕೊರೆಸಲು ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ತರೀಕೆರೆ ಉಪ ವಿಭಾಗಾಧಿಕಾರಿ ಕಾಂತರಾಜ್ ಸೂಚಿಸಿದರು

ಪಟ್ಟಣದ ತಾಪಂ ಸಭಾಂಗಣದಲ್ಲಿ ಕುಡಿಯುವ ನೀರಿನ ನಿರ್ವಹಣೆಗಾಗಿ ನಡೆದ ಟಾಸ್ಕ್ ಪೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳನ್ನು ಗುರುತಿಸಿ ಅಗತ್ಯ ಇರುವ ಕಡೆಗಳಲ್ಲಿ ಹೊಸದಾಗಿ ಕೊಳವೆ ಬಾವಿಕೊರೆಸಲು ಮುಂದಾಗಬೇಕು. ಕುಡಿಯುವ ನೀರಿಗೆ ಹೊಸ ಪೈಪ್‍ಲೈನ್ ಕಾಮಗಾರಿ ವ್ಯವಸ್ಥೆಯಲ್ಲಿ ವಿಳಂಬ ಮಾಡದೆ ತ್ವರಿತವಾಗಿ ಪೂರ್ಣಗೊಳಿಸಿ ನೀರು ಪೂರೈಕೆ ಮಾಡುವಂತೆ ಸೂಚಿಸಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಇಇ ರವಿಶಂಕರ್ ಮಾತನಾಡಿ, ಈಗಾಗಲೇ ನೀರಿನ ಸಮಸ್ಯೆಯ 31 ಗ್ರಾಮಗಳನ್ನು ಗುರುತಿಸಲಾಗಿದೆ. ಬಹು ಮುಖ್ಯವಾಗಿ ಎರಡು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬಗೆಹರಿಸಲಾಗಿದೆ. ಹೊಸದಾಗಿ 18 ಕೊಳವೆಬಾವಿ ಕೊರೆಸಲಾಗಿದ್ದು ಇದರಲ್ಲಿ 4 ಕೊಳವೆ ಬಾವಿಗಳು ವಿಫಲವಾಗಿವೆ. ತಾಲೂಕಿನ ಜೋಡಿತಿಮ್ಮಾಪುರ ಗ್ರಾಮದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಗೆ ಟ್ಯಾಂಕರ್ ಮೂಲಕ ಸರಬರಾಜಿಗೆ ಕ್ರಮವಹಿಸಲಾಗುತ್ತಿದೆ. ಅಲ್ಲದೆ ಮಚ್ಚೇರಿ ಗ್ರಾಮದಲ್ಲಿ ಖಾಸಗಿಯವರಿಂದ ನೀರನ್ನು ಬಾಡಿಗೆ ನೀಡಿ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.ತಾಪಂ ಇಒ ಸಿ.ಆರ್. ಪ್ರವೀಣ್ ಮಾತನಾಡಿ, ತಾಲೂಕಿನಲ್ಲಿ 23 ವಾರಗಳಿಗಾಗುವಷ್ಟು ಮೇವು ದಾಸ್ತಾನು ಇದ್ದರೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳ ಜಮೀನು ರಹಿತ ರೈತರು ಹೈನುಗಾರಿಕೆ ನಡೆಸುತ್ತಿರುವ ರೈತರು ತಮ್ಮ ಜಾನುವಾರುಗಳಿಗೆ ಮೇವಿನ ಅವಶ್ಯವಿದ್ದರೆ ಸ್ಥಳೀಯ ಪಂಚಾಯಿತಿ ಹಾಗೂ ಪಶು ಆಸ್ಪತ್ರೆಗಳಲ್ಲಿ ಅರ್ಜಿ ನೀಡುವ ಮೂಲಕ ರಿಯಾಯ್ತಿ ದರದಲ್ಲಿ ಮೇವು ಪಡೆದುಕೊಳ್ಳಲು ಪಿಡಿಒಗಳು ಜಾಗೃತಿ ಮೂಡಿಸಬೇಕು. ಕುಡಿಯುವ ನೀರಿನ ಸಮಸ್ಯೆ ಉಲ್ಪಣ ವಾಗಿರುವ ಸರಸ್ವತಿಪುರ, ಕಾರೇಹಳ್ಳಿ ಹಾಗೂ ದೊಡ್ಡಘಟ್ಟ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜಿಗೆ ಕ್ರಮ ವಹಿಸಬೇಕು ಎಂದರು.ಸಭೆಯಲ್ಲಿ ತಹಸೀಲ್ದಾರ್ ಎಂ.ಪಿ.ಕವಿರಾಜ್, ಪಶು ಸಹಾಯಕ ನಿರ್ದೇಶಕ ಡಾ. ಉಮೇಶ್, ಬಿಇಒ ಆರ್. ಸಿದ್ದರಾಜುನಾಯ್ಕ ಹಾಗೂ ಪಿಡಿಒಗಳು ಇದ್ದರು.10ಕೆಕೆಡಿಯು1.

ಕಡೂರು ಪಟ್ಟಣದ ತಾ ಪಂ ಸಭಾಂಗಣದಲ್ಲಿ ಕುಡಿಯುವ ನೀರಿನ ನಿರ್ವಹಣೆಗೆ ನಡೆದ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ತರೀಕೆರೆ ಉಪವಿಭಾಗಾಧಿಕಾರಿ ಕಾಂತರಾಜು ಮಾತನಾಡಿದರು.