ಮಣಿಪುರ ಹಿಂಸಾಚಾರ: ಪರಿಹಾರಕ್ಕೆ ಕರ್ನಾಟಕ ಮೈಥೇಯಿ ಅಸೋಸಿಯೇಷನ್‌ ಒತ್ತಾಯ

| Published : May 04 2024, 01:35 AM IST

ಮಣಿಪುರ ಹಿಂಸಾಚಾರ: ಪರಿಹಾರಕ್ಕೆ ಕರ್ನಾಟಕ ಮೈಥೇಯಿ ಅಸೋಸಿಯೇಷನ್‌ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ಮಣಿಪುರದಲ್ಲಿ ಹಿಂಸಾಚಾರ ಸಂತ್ರಸ್ತರಿಗೆ ಪರಿಹಾರ ನೀಡಲು ಆಗ್ರಹಿಸಿ ಮಣಿಪುರ ಸರ್ಕಾರ ಮತ್ತು ಕೇಂದ್ರ ಸರ್ಕಾರ ವಿರುದ್ಧ ಕರ್ನಾಟಕ ಮೈಥೇಯಿ ಅಸೋಸಿಯೇಷನ್‌ ಪ್ರತಿಭಟನೆ.

ಬೆಂಗಳೂರು: ಮಣಿಪುರದಲ್ಲಿ ಹಿಂಸಾಚಾರ ನಡೆದು ಒಂದು ವರ್ಷವಾದರೂ ಸಂತ್ರಸ್ತರಿಗೆ ಪರಿಹಾರ ನೀಡಿಲ್ಲ. ಆದ್ದರಿಂದ ಮಣಿಪುರ ಸರ್ಕಾರ ಮತ್ತು ಕೇಂದ್ರ ಸರ್ಕಾರ ತಕ್ಷಣ ಪರಿಹಾರ ನೀಡಬೇಕು ಎಂದು ಕರ್ನಾಟಕ ಮೈಥೇಯಿ ಅಸೋಸಿಯೇಷನ್‌ ಅಧ್ಯಕ್ಷ ಸುಭಾಷ್‌ ಟಕೆಲ್ಲಂಬಾಮ್‌ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಪುರದಲ್ಲಿ ಹಿಂಸಾಚಾರ ನಡೆದು ಒಂದು ವರ್ಷವಾದರೂ ಸಂತ್ರಸ್ತರಿಗೆ ಪರಿಹಾರ ನೀಡಿಲ್ಲ. ಆದ್ದರಿಂದ ಮಣಿಪುರ ಸರ್ಕಾರ ಮತ್ತು ಕೇಂದ್ರ ಸರ್ಕಾರ ತಕ್ಷಣ ಪರಿಹಾರ ನೀಡಬೇಕು. ಆಸ್ತಿ ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸಬೇಕು. ಶಾಂತಿ ನೆಲೆಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ನಾವು ಯಾವುದೇ ಸಮುದಾಯದ ವಿರುದ್ಧ ಆರೋಪ ಮಾಡುತ್ತಿಲ್ಲ. ಮಣಿಪುರದಲ್ಲಿ ಶಾಂತಿ ನೆಲಸಬೇಕು ಎಂಬುದು ನಮ್ಮ ಮನವಿಯಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಪತ್ರಿಕಾಗೋಷ್ಠಿಯ ಬಳಿಕ ಸಂಘಟನೆಯ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದರು.