ನಾಪೋಕ್ಲು: ‘ವ್ಯಕ್ತಿತ್ವ ವಿಕಸನ ಮತ್ತು ಬೆಳವಣಿಗೆ’ ಉಪನ್ಯಾಸ

| Published : May 08 2024, 01:02 AM IST

ನಾಪೋಕ್ಲು: ‘ವ್ಯಕ್ತಿತ್ವ ವಿಕಸನ ಮತ್ತು ಬೆಳವಣಿಗೆ’ ಉಪನ್ಯಾಸ
Share this Article
  • FB
  • TW
  • Linkdin
  • Email

ಸಾರಾಂಶ

ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮತ್ತು ಐಕ್ಯೂ ಎ ಸಿ ಸಹಯೋಗದೊಂದಿಗೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವ್ಯಕ್ತಿತ್ವ ವಿಕಸನ ಮತ್ತು ಬೆಳವಣಿಗೆ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಬೆಂಗಳೂರಿನ ಡಾ. ನಾಗರಾಜ್ ರಾವ್ ಎಸ್. ಉಪನ್ಯಾಸ ನೀಡಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ವಿದ್ಯಾರ್ಥಿಗಳು ವಿದ್ಯೆ ಜೊತೆಗೆ ತಮ್ಮ ವ್ಯಕ್ತಿತ್ವ ರೂಪಿಸಿಕೊಂಡು ತಮ್ಮ ಜೀವನದ ಮೌಲ್ಯಗಳ ಬೆಳವಣಿಗೆಗೆ ಅಡಿಪಾಯ ಹಾಕಿಕೊಳ್ಳಬೇಕು ಎಂದು ಸಮಾಜ ಸೇವಕ ಬೆಂಗಳೂರಿನ ಡಾ. ನಾಗರಾಜ್ ರಾವ್ ಎಸ್. ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮತ್ತು ಐಕ್ಯೂ ಎ ಸಿ ಸಹಯೋಗದೊಂದಿಗೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವ್ಯಕ್ತಿತ್ವ ವಿಕಸನ ಮತ್ತು ಬೆಳವಣಿಗೆ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದು ಸ್ಪರ್ಧಾತ್ಮಕ ಪ್ರಪಂಚವಾಗಿದ್ದು ಓದಿನ ಜೊತೆ ಈಗಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿ ವಿದ್ಯಾರ್ಥಿಗಳು ಯಶಸ್ವಿಯಾಗಬೇಕು. ಸದ್ಯದ ಪರಿಸ್ಥಿತಿಯಲ್ಲಿ ಖಾಸಗಿ ಕಂಪನಿಗಳಲ್ಲಿ ನಡೆಸುವ ಸಂದರ್ಶನಗಳ ಬಗ್ಗೆ ಅರಿವು ಇರಬೇಕು. ವಿದ್ಯಾರ್ಥಿಗಳು ಅದಕ್ಕಾಗಿ ತಯಾರಿ ನಡೆಸಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆದಷ್ಟು ಇಂಗ್ಲಿಷ್ ಭಾಷೆಯನ್ನು ಕಲಿತು ಎಲ್ಲರೊಂದಿಗೆ ಸಂದರ್ಶನಗಳಲ್ಲಿ ಪಾಲ್ಗೊಂಡು ಯಶಸ್ವಿ ಆಗಬೇಕು ಎಂದರು.

ಉದ್ಯಮಿ ಎಂ.ಆರ್. ಶ್ರೀನಿವಾಸ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಎನ್.ಪಿ ಕಾವೇರಿ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದರು.

ಅಂಕುರ್ ಶಾಲೆಯ ಪ್ರಾಂಶುಪಾಲ ರತ್ನ ಚರ್ಮಣ್ಣ ಅವರನ್ನು ಲಯನ್ ಸಂಸ್ಥೆ ಮತ್ತು ಕಾಲೇಜಿನ ವತಿಯಿಂದ ಗೌರವಿಸಲಾಯಿತು.

ಕೊಡಗು ವೈದ್ಯಕೀಯ ಕಾಲೇಜು ಮಡಿಕೇರಿಯ ನಿವೃತ್ತ ಮುಖ್ಯ ಆಡಳಿತಾಧಿಕಾರಿ ಮೇರಿ ಚಿಟ್ಟಿಯಪ್ಪ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ದೇವಯ್ಯ ಪಾಲ್ಗೊಂಡಿದ್ದರು.

ಪ್ರಾಂಶುಪಾಲ ಡಾ. ಎನ್.ಪಿ ಕಾವೇರಿ ಸ್ವಾಗತಿಸಿದರು ಕನ್ನಡ ಉಪನ್ಯಾಸಕಿ ಎ.ಕೆ ಹರಿಣಿ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಶಿವರಾಜ್ ಕುಮಾರ್ ಕೆ.ಎಸ್ ವಂದಿಸಿದರು.