ಬೀದರ್‌ ಕಾಂಗ್ರೆಸ್‌ ಅಭ್ಯರ್ಥಿ ಸಾಗರ ಖಂಡ್ರೆ ಪರ ಮತಯಾಚನೆ

| Published : Apr 27 2024, 01:01 AM IST

ಬೀದರ್‌ ಕಾಂಗ್ರೆಸ್‌ ಅಭ್ಯರ್ಥಿ ಸಾಗರ ಖಂಡ್ರೆ ಪರ ಮತಯಾಚನೆ
Share this Article
  • FB
  • TW
  • Linkdin
  • Email

ಸಾರಾಂಶ

ದೇಶದಲ್ಲಿ ಬಿಜೆಪಿ ಕಳೆದ ಹತ್ತು ವರ್ಷಗಳಿಂದ ಅಧಿಕಾರ ನಡೆಸುತ್ತಿದೆ. ಆದರೆ ಬಡವರ ಬಗ್ಗೆ ಕಾಳಜಿ ಇಲ್ಲ ಶ್ರೀಮಂತರ ಪರವಾಗಿ ಕೆಲಸ ಮಾಡಿ ಬಡವರನ್ನು ನಿರ್ಲಕ್ಷತನ ಮಾಡಿದೆ. ಕಾಂಗ್ರೆಸ್‌ ಪಕ್ಷವು ಎಲ್ಲ ವರ್ಗದ ಜನರ ಅಭಿವೃದ್ಧಿ ಬಗ್ಗೆ ಕಾಳಜಿ ಇದೆ.

ಕನ್ನಡಪ್ರಭ ವಾರ್ತೆ ಚಿಂಚೋಳಿ

ಬೀದರ್‌ ಲೋಕಸಭಾ ಮತಕ್ಷೇತ್ರದ ಚಿಂಚೋಳಿ ಮೀಸಲು ವಿಧಾನಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್‌ ಮುಖಂಡರು ತಾಲೂಕಿನ ದೇಗಲಮಡಿ, ನಾಗಾಇದಲಾಯಿ, ಹಸರಗುಂಡಗಿ, ಸಾಲೇಬೀರನಳ್ಳಿ ಗ್ರಾಮಗಳಲ್ಲಿ ಬೀದರ್‌ ಕಾಂಗ್ರೆಸ್‌ ಅಭ್ಯರ್ಥಿ ಸಾಗರ ಖಂಡ್ರೆ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.

ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ಮಾಜಿ ಶಾಸಕ ಕೈಲಾಶನಾಥ ಪಾಟೀಲ ದೇಗಲಮಡಿ ಗ್ರಾಮದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ, ದೇಶದಲ್ಲಿ ಬಿಜೆಪಿ ಕಳೆದ ಹತ್ತು ವರ್ಷಗಳಿಂದ ಅಧಿಕಾರ ನಡೆಸುತ್ತಿದೆ. ಆದರೆ ಬಡವರ ಬಗ್ಗೆ ಕಾಳಜಿ ಇಲ್ಲ ಶ್ರೀಮಂತರ ಪರವಾಗಿ ಕೆಲಸ ಮಾಡಿ ಬಡವರನ್ನು ನಿರ್ಲಕ್ಷತನ ಮಾಡಿದೆ. ಕಾಂಗ್ರೆಸ್‌ ಪಕ್ಷವು ಎಲ್ಲ ವರ್ಗದ ಜನರ ಅಭಿವೃದ್ಧಿ ಬಗ್ಗೆ ಕಾಳಜಿ ಇದೆ. ತಾಲೂಕಿನಲ್ಲಿ ಮಾಜಿ ಸಿಎಂ ವೀರೇಂದ್ರ ಪಾಟೀಲರು ತಮ್ಮ ಅಧಿಕಾರ ಅವಧಿಯಲ್ಲಿ ಚಿಂಚೋಳಿ ತಾಲೂಕಿನಲ್ಲಿ ೨೦ ಸಣ್ಣ ನೀರಾವರಿ ಕೆರೆಗಳು ಕೆಳದಂಡೆ ಮುಲ್ಲಾಮರಿ, ಚಂದ್ರಂಪಳ್ಳಿ ಜಲಾಶಯಗಳನ್ನು ನಿರ್ಮಿಸಿ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಬಿಜೆಪಿ ಎಲ್ಲ ಕ್ಷೇತ್ರದಲ್ಲಿ ವಿಫಲವಾಗಿದೆ. ಬೀದರ್‌ ಕಾಂಗ್ರೆಸ್‌ ಅಭ್ಯರ್ಥಿ ಸಾಗರ ಖಂಡ್ರೆ ಅವರ ಗೆಲುವಿಗೆ ಶ್ರಮಿಸಬೇಕೆಂದು ಮನವಿ ಮಾಡಿದರು.

ಕೆಪಿಸಿಸಿ ಉಪಾಧ್ಯಕ್ಷ ಸುಭಾಷ ರಾಠೋಡ ಮಾತನಾಡಿ, ಬಿಜೆಪಿ ಅಧಿಕಾರ ಅವಧಿಯಲ್ಲಿ ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಕಾಂಗ್ರೆಸ್‌ ಪಕ್ಷವು ಚುನಾವಣೆಯಲ್ಲಿ ಜನರಿಗೆ ನೀಡಿದ ೫ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದಿದೆ. ಬೀದರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರ ಜನರ ಒಲವು ಹೆಚ್ಚಾಗಿದೆ ಎಂದರು.

ಸಭೆಯಲ್ಲಿ ಬಾಬುರಾವ ಪಾಟೀಲ, ಜಿಪಂ ಮಾಜಿ ಅಧ್ಯಕ್ಷ ಭೀಮರಾವ ತೇಗಲತಿಪ್ಪಿ, ಬಸಯ್ಯ ಗುತ್ತೆದಾರ,ಸೈಯದ ಮಹೆಮೂದ ಪಟೇಲ್ ಮಾತನಾಡಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಸಾಗರ ಖಂಡ್ರೆ ಗೆಲುವಿಗೆ ಕರೆ ನೀಡಿದರು.

ಸಭೆಯಲ್ಲಿ ಕಾಂಗ್ರೆಸ್‌ ಮುಖಂಡರಾದ ವೀಕ್ಷಕ ಕೆಪಿಸಿಸಿಐ ಉಪಾಧ್ಯಕ್ಷ ಜಾನ್ ವೆಲ್ಲಸ್ಸಿ, ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಮಲಿ, ಅಜೀತ ಪಾಟಿಲ, ಪುರಸಭೆ ಸದಸ್ಯ ಆನಂದ ಟೈಗರ್‌, ಶರಣು ಮೋತಕಪಳ್ಳಿ, ಅನೀಲ ಜಮಾದಾರ, ಲಕ್ಷ್ಮಣ ಆವಂಟಿ, ವೀರಶೆಟ್ಟಿ ಪಾಟೀಲ ಇನ್ನಿತರಿದ್ದರು.