ಡಾ. ಲಕ್ಷ್ಮಣ ಪ್ರಭುಗೆ ರಾಷ್ಟ್ರಪತಿಗಳಿಂದ ಮರಣೋತ್ತರ ಪ್ರಶಸ್ತಿ ಪ್ರದಾನ

| Published : May 11 2024, 12:04 AM IST

ಡಾ. ಲಕ್ಷ್ಮಣ ಪ್ರಭುಗೆ ರಾಷ್ಟ್ರಪತಿಗಳಿಂದ ಮರಣೋತ್ತರ ಪ್ರಶಸ್ತಿ ಪ್ರದಾನ
Share this Article
  • FB
  • TW
  • Linkdin
  • Email

ಸಾರಾಂಶ

ದಿ.ಡಾ. ಲಕ್ಷ್ಮಣ ಪ್ರಭು ಅವರ ಪತ್ನಿ ಕವಿತಾ ಪ್ರಭು ಅವರು ಪ್ರೆಸಿಡೆಂಟ್ಸ್ ಅವಾರ್ಡ್ ಆ- ಮೆರಿಟ್ ದ್ಯೋತಕವಾಗಿ ಚಿನ್ನದ ಪದಕ, ಪ್ರಮಾಣಪತ್ರವನ್ನು ರಾಷ್ಟ್ರಪತಿಗಳಿಂದ ಸ್ವೀಕರಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರಿನ ಹೆಸರಾಂತ ಮೂತ್ರಾಂಗ ಶಸ್ತ್ರ ಚಿಕಿತ್ಸಾ ತಜ್ಞ ದಿ. ಡಾ. ಜಿ.ಜಿ. ಲಕ್ಷ್ಮಣ ಪ್ರಭು ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಶ್ರೇಷ್ಠತಾ ಪ್ರಶಸ್ತಿ ಪ್ರದಾನ ಮಾಡಿದರು.ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ರಾಷ್ಟ್ರೀಯ ವೈದ್ಯಕೀಯ ಪರೀಕ್ಷಾ ಮಂಡಳಿಯ (ಎನ್‌ಬಿಇಎಂಎಸ್) ೨೨ನೇ ಘಟಿಕೋತ್ಸವದಲ್ಲಿ ದಿ.ಡಾ. ಲಕ್ಷ್ಮಣ ಪ್ರಭು ಅವರ ಪತ್ನಿ ಕವಿತಾ ಪ್ರಭು ಅವರು ಪ್ರೆಸಿಡೆಂಟ್ಸ್ ಅವಾರ್ಡ್ ಆ- ಮೆರಿಟ್ ದ್ಯೋತಕವಾಗಿ ಚಿನ್ನದ ಪದಕ, ಪ್ರಮಾಣಪತ್ರವನ್ನು ರಾಷ್ಟ್ರಪತಿಗಳಿಂದ ಸ್ವೀಕರಿಸಿದರು.

ಆರೋಗ್ಯ ಕ್ಷೇತ್ರವನ್ನು ಗುಣಾತ್ಮಕವಾಗಿ, ಸಂಖ್ಯಾತ್ಮಕವಾಗಿ ಅಭಿವೃದ್ಧಿಪಡಿಸಲು ವೈದ್ಯ ಜಗತ್ತಿನ ಕೊಡುಗೆ ಅಪಾರವಾದುದು. ವೈದ್ಯಕೀಯ ಪ್ರವಾಸೋದ್ಯಮವನ್ನು ಬೆಳೆಸಿ ಸ್ವಸ್ಥ ಸಮಾಜವನ್ನು ರೂಪಿಸುವ ಹೊಣೆಗಾರಿಕೆ ವೈದ್ಯ ಲೋಕಕ್ಕೆ ಇದೆ ಎಂದು ರಾಷ್ಟ್ರಪತಿಗಳು ಹೇಳಿದರು.

ಎನ್‌ಬಿಇಎಂಎಸ್ ಅಧ್ಯಕ್ಷ ಡಾ. ಅಭಿಜಾತ್ ಶೇಟ್, ಯುರಾಲಜಿಕಲ್ ಸೊಸೈಟಿ ಆ- ಇಂಡಿಯಾದ ಮಾಜಿ ಅಧ್ಯಕ್ಷ ಡಾ.ಮಹೇಶ್ ದೇಸಾಯಿ, ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಾರ್ಯದರ್ಶಿ ಅಪೂರ್ವ ಚಂದ್ರ ಇದ್ದರು.

ಡಾ. ಲಕ್ಷ್ಮಣ ಪ್ರಭು ಅವರು ಮಂಗಳೂರು ಕೆಎಂಸಿಯ ಮೂತ್ರಾಂಗ ಶಸಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸುವ ಮೂಲಕ ಜನಪ್ರಿಯರಾಗಿದ್ದರು. ಹಲವು ಸಂಕೀರ್ಣ ವೈದ್ಯಕೀಯ ಪ್ರಕರಣಗಳನ್ನು ನಿರ್ವಹಿಸಿದ್ದರು. ಯುರಾಲಜಿಕಲ್ ಸೊಸೈಟಿ ಆ- ಇಂಡಿಯಾದ ಕಾರ್ಯದರ್ಶಿಯಾಗಿ ಡಾ. ಪ್ರಭು ಅವರು ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸಿ ವೈಜ್ಞಾನಿಕ ಪ್ರಬಂಧಗಳನ್ನು ಮಂಡಿಸಿದ್ದರು. ಡಾ. ಪ್ರಭು ಅವರು ಅಸೌಖ್ಯದಿಂದ ೨೦೨೩ರ ನವೆಂಬರ್ ೧೭ರಂದು ನಿಧನ ಹೊಂದಿದ್ದರು.