ನೇಹಾ ಹತ್ಯೆ ಖಂಡಿಸಿ ನಾಳೆ ಪ್ರತಿಭಟನೆ

| Published : Apr 23 2024, 12:45 AM IST

ಸಾರಾಂಶ

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಖಂಡಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ವೀರಶೈವ ಲಿಂಗಾಯಿತ ಸಂಘ ಸಂಸ್ಥೆಗಳಿಂದ ಏ.24ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್‌ ಕುಮಾರ್‌ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಖಂಡಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ವೀರಶೈವ ಲಿಂಗಾಯಿತ ಸಂಘ ಸಂಸ್ಥೆಗಳಿಂದ ಏ.24ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್‌ ಕುಮಾರ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ನೇಹಾ ಹಿರೇಮಠಳನ್ನು ಜಿಹಾದಿ ಮನಸ್ಥಿತಿಯ ಫಯಾಜ್ ಹತ್ಯೆ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆಯನ್ನು ಏ.24ರ ಬುಧವಾರದಂದು ಬೆಳಗ್ಗೆ 11ಗಂಟೆಗೆ ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಜಿಲ್ಲಾಡಳಿತ ಭವನದ ಮುಂಭಾಗ ಜಿಲ್ಲಾಧಿಕಾರಿಯವರಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುವುದು.ಶರಣ ಬ೦ಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ಹತ್ಯೆಯಾದ ಕುಮಾರಿ ನೇಹಾ ಹಿರೇಮಠಳ ಆತ್ಮಕ್ಕೆ ಶಾಂತಿ ಹಾಗೂ ಅವರ ಕುಟುಂಬ ವರ್ಗದವರಿಗೆ ನಿಮ್ಮೊಂದಿಗೆ ನಾವಿದ್ದೇವೆ ಎನ್ನುವ ಸಂದೇಶವನ್ನು ಪ್ರತಿಭಟನೆ ಮೂಲಕ ನೀಡಬೇಕಾಗಿ ಮನವಿ ಮಾಡಿದರು.

ಮಹಾಸಭಾ ಉಪಾಧ್ಯಕ್ಷ ಬಿ.ಎಂ.ಪ್ರಭುಸ್ವಾಮಿ ಮಾತನಾಡಿ, ನೇಹಾಳ ಹತ್ಯಾ ವಿಚಾರವಾಗಿ ಘಟನೆಯನ್ನು ಪಕ್ಷಾತೀತವಾಗಿ ಖಂಡಿಸುವ ಕೆಲಸವಾಗಬೇಕು. ಆದರೆ, ಸಿಎಂ, ಡಿಸಿಎಂ ಈ ವಿಚಾರವಾಗಿ ಕನಿಷ್ಠ ಸಾಂತ್ವಾನ ಹೇಳುವ ಕೆಲಸ ಮಾಡಿಲ್ಲ, ಕೃತ್ಯವೆಸಗಿರುವ ವ್ಯಕ್ತಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಈ ಕೃತ್ಯ ಖಂಡಿಸಿ ನಡೆಯುವ ಪ್ರತಿಭಟನೆಗೆ 10 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕದಳಿ ವೇದಿಕೆಯ ವಸಂತಮ್ಮ, ಎನ್‌ರಿಚ್‌ ಮಹದೇವಸ್ವಾಮಿ, ಕೋಡಿಮೋಳೆ ರಾಜಶೇಖರ್‌, ಗುರುಸ್ವಾಮಿ ಹೊಸಪಾಳ್ಯ, ನಟೇಶ್‌, ನಿರ್ದೇಶಕರಾದ ಕಂಠಿ ಬಸವರಾಜು ಇದ್ದರು.