ಸಾಹಿತ್ಯ ಪುಸ್ತಕ ಓದಿ ಕನ್ನಡಕ್ಕೆ ಉತ್ತೇಜನ ನೀಡಿ

| Published : May 08 2024, 01:00 AM IST

ಸಾಹಿತ್ಯ ಪುಸ್ತಕ ಓದಿ ಕನ್ನಡಕ್ಕೆ ಉತ್ತೇಜನ ನೀಡಿ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಗ್ರಂಥಾಲಯಗಳಿಗೆ ಭೇಟಿ ನೀಡಿ ಉತ್ತಮ ಸಾಹಿತ್ಯ ಕೃತಿಗಳನ್ನು ಓದುವ ಮೂಲಕ ಕನ್ನಡಕ್ಕೆ ಉತ್ತೇಜನ ನೀಡಬೇಕಿದೆ ಎಂದು ಶಾಂತಲಾ‌ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ಛಾಯಾ ಎಸ್.ಕುಮಾರ್ ಹೇಳಿದರು. ಬೇಲೂರಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಉದ್ಘಾಟನೆ ನಡೆಸಿ ಮಾತನಾಡಿದರು.

ಡಾ.ಛಾಯಾ ಎಸ್.ಕುಮಾರ್ । ತಾ.ಕಸಾಪದ ಸಂಸ್ಥಾಪನಾ ದಿನ

ಬೇಲೂರು: ಸಾಹಿತ್ಯ ಅಭಿರುಚಿಯನ್ನು ಪ್ರತಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಗ್ರಂಥಾಲಯಗಳಿಗೆ ಭೇಟಿ ನೀಡಿ ಉತ್ತಮ ಸಾಹಿತ್ಯ ಕೃತಿಗಳನ್ನು ಓದುವ ಮೂಲಕ ಕನ್ನಡಕ್ಕೆ ಉತ್ತೇಜನ ನೀಡಬೇಕಿದೆ ಎಂದು ಶಾಂತಲಾ‌ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ಛಾಯಾ ಎಸ್.ಕುಮಾರ್ ಹೇಳಿದರು.

ಪಟ್ಟಣದ ಶಾಂತಲಾ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಉದ್ಘಾಟನೆ ನಡೆಸಿ ಮಾತನಾಡಿ, ಸಾಹಿತ್ಯ ಸಂಸ್ಕೃತಿಗೆ ಬುನಾದಿಯಾಗಿದೆ. ಈ ಕಾರಣದಿಂದಲೇ ವಿಶ್ವದ ಸಾಹಿತ್ಯದಲ್ಲಿ ಕನ್ನಡದ ಸಾಹಿತ್ಯಕ್ಕೆ ಅಮೂಲಾಗ್ರ ಸ್ಥಾನ ಇದೆ. ಆ ಕಾರಣದಿಂದ ಕನ್ನಡ ಪುಸ್ತಕಗಳನ್ನು ಓದುವ ನಿಟ್ಟಿನಲ್ಲಿ ಮುಂದಾಗಬೇಕಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಗೌರವ ಕಾರ್ಯದರ್ಶಿ ಆರ್.ಎಸ್. ಮಹೇಶ್ ಮಾತನಾಡಿ, ‘ಕನ್ನಡ ಸಾಹಿತ್ಯ ಪರಿಷತ್ತು ನಮ್ಮೆಲ್ಲರಿಗೆ ಏಕತೆ, ಅಸ್ಮಿತೆಯ ಸಂಕೇತ. ಸಾಹಿತ್ಯ ಪರಿಷತ್ತು ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ ಅನೇಕ ಮಹನೀಯರು, ಹೋರಾಟಗಾರರು ಪರಿಷತ್ತಿನ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ. ಪರಿಷತ್ತು ಉದಯಕ್ಕೆ ಕಾರಣರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ನಾವು ಈ ಸಂದರ್ಭದಲ್ಲಿ ಸ್ಮರಿಸಬೇಕು’ ಎಂದು ತಿಳಿಸಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಬಿ.ಎಲ್.ರಾಜೇಗೌಡ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಈಗಾಗಲೇ ಶತಮಾನ ಪೂರೈಸಿ ನಾಡು, ನುಡಿ, ಜಲ ವಿಷಯದಲ್ಲಿ ಮತ್ತು ಕನ್ನಡದ ಸಾಹಿತ್ಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಇತ್ತೀಚೆಗೆ ಪುಸ್ತಕಗಳ ಅಧ್ಯಯನ, ಆಸಕ್ತಿ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸಾಹಿತ್ಯಾಸಕ್ತಿ ನೀಡುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮ ನಡೆಸುತ್ತ ಬಂದಿದೆ. ಬೇಲೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸಾಹಿತ್ಯ, ಕಲೆ.ಸಂಸ್ಕೃತಿ, ನೃತ್ಯ ಇವುಗಳಿಗೆ ಸೂಕ್ತ ವೇದಿಕೆ ನೀಡುತ್ತ ಬಂದಿದೆ ಎಂದರು.

ಸಾಹಿತಿ ಸೋಂಪುರ ಪ್ರಕಾಶ್, ಕಸಾಪ ಮಾಜಿ ಅಧ್ಯಕ್ಷ ಶಿವಮುರ್ತಿ, ಮಾ.ನ.ಮಂಜೇಗೌಡ, ಸಾಹಿತಿ ಮಾರುತಿ ದೊಡ್ಡಕೊಡಿಹಳ್ಳಿ ಇದ್ದರು.