ಕುಡಿಯುವ ನೀರು ಕೊರತೆ ಆಗದಂತೆ ಸಮರ್ಪಕವಾಗಿ ನಿರ್ವಹಿಸಿ:ಅಂಜುಂ ಪರ್ವೆಜ್

| Published : May 10 2024, 01:36 AM IST

ಕುಡಿಯುವ ನೀರು ಕೊರತೆ ಆಗದಂತೆ ಸಮರ್ಪಕವಾಗಿ ನಿರ್ವಹಿಸಿ:ಅಂಜುಂ ಪರ್ವೆಜ್
Share this Article
  • FB
  • TW
  • Linkdin
  • Email

ಸಾರಾಂಶ

ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ನೀರಿನ ಪರೀಕ್ಷೆ, ಜೆಜೆಎಂ ಯೋಜನೆಯ ಭೌತಿಕ ಮತ್ತು ಆರ್ಥಿಕ ಪ್ರಗತಿ, ನರೇಗಾ ಯೋಜನೆಯ ಕ್ರಿಯಾ ಯೋಜನೆ ಮತ್ತು ಕಾಮಗಾರಿಗಳ ಬಗ್ಗೆ ಪರಿಶೀಲನೆ

ಕನ್ನಡಪ್ರಭ ವಾರ್ತೆ ಮೈಸೂರು

ಬೋರ್ ವೆಲ್ ಗಳನ್ನು ಕೊರೆಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಕೊರತೆಯಾಗದಂತೆ ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೂಚಿಸಿದರು.

ಮೈಸೂರು ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಗುರುವಾರ ನಡೆದ ಜೆಜೆಎಂ, ಕುಡಿಯುವ ನೀರು, ನರೇಗಾ ಮತ್ತು ಎಸ್ ಬಿಎಂ(ಗ್ರಾಮೀಣ) ಯೋಜನೆ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ನೀರಿನ ಪರೀಕ್ಷೆ, ಜೆಜೆಎಂ ಯೋಜನೆಯ ಭೌತಿಕ ಮತ್ತು ಆರ್ಥಿಕ ಪ್ರಗತಿ, ನರೇಗಾ ಯೋಜನೆಯ ಕ್ರಿಯಾ ಯೋಜನೆ ಮತ್ತು ಕಾಮಗಾರಿಗಳ ಬಗ್ಗೆ ಪರಿಶೀಲನೆ ಮಾಡಿದರು.

ಅನುಷ್ಠಾನ ಇಲಾಖೆಗಳಲ್ಲಿ ಹೆಚ್ಚಾಗಿ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಲು ಸೂಚನೆ ನೀಡಿದರು. ನರೇಗಾ ಯೋಜನೆಯಡಿ ಹೆಚ್ಚಿನ ಆಸ್ತಿಗಳ ಸೃಜನೆ ಮತ್ತು ಈಗಾಗಲೇ ಸೃಜಿಸಿರುವ ಆಸ್ತಿಗಳ ನಿರ್ವಹಣೆ ಮಾಡಲು ತಿಳಿಸಿದರು.

ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಬೂದು ನೀರು ನಿರ್ವಹಣಾ ಘಟಕ ಕುರಿತು ಹಾಗೂ ಸಮುದಾಯ ಬಚ್ಚಲು ಗುಂಡಿ ಕಾಮಗಾರಿಗಳನ್ನು ಕೈಗೊಳ್ಳಲು ಸೂಚಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಸಂಗ್ರಹಣೆ, ಸಕಾಲ, ಬಾಪೂಜಿ ಸೇವಾ ಕೇಂದ್ರ ಮತ್ತು ಡಿಜಿಟಲ್ ಲೈಬ್ರರಿ ಕುರಿತು ಚರ್ಚಿಸಲಾಯಿತು.

ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಉಪ ಕಾರ್ಯದರ್ಶಿಗಳಾದ ನಾಗರಾಜು, ಜಗನ್ನಾಥ್ ಮೂರ್ತಿ, ಮುಖ್ಯ ಯೋಜನಾಧಿಕಾರಿ ಮಂಜುನಾಥ್ ಅಂಗಡಿ, ಮುಖ್ಯ ಲೆಕ್ಕಾಧಿಕಾರಿ ಜಿ. ಬಸವರಾಜು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಂಜಿತ್ ಮೊದಲಾದವರು ಇದ್ದರು.