ಭರತೇಶ ಶಿಕ್ಷಣ ಸಂಸ್ಥೆಗೆ ಶೆಟ್ಟರ್ ಭೇಟಿ, ಮತಯಾಚನೆ

| Published : Apr 27 2024, 01:23 AM IST

ಸಾರಾಂಶ

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿಯ ಭರತೇಶ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ವರ್ಗದವರೊಂದಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಆಭ್ಯರ್ಥಿ ಜಗದೀಶ ಶೆಟ್ಟರ್ ಅವರು ಶುಕ್ರವಾರ ಪ್ರಚಾರ ಸಭೆ ನಡೆಸಿ, ಮತಯಾಚನೆ ಮಾಡಿದರು‌.

ಕನ್ನಡಪ್ರಭ ವಾರ್ತೆ ಬೆಳಗಾವಿಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿಯ ಭರತೇಶ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ವರ್ಗದವರೊಂದಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಆಭ್ಯರ್ಥಿ ಜಗದೀಶ ಶೆಟ್ಟರ್ ಅವರು ಶುಕ್ರವಾರ ಪ್ರಚಾರ ಸಭೆ ನಡೆಸಿ, ಮತಯಾಚನೆ ಮಾಡಿದರು‌.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಮತ್ತೆ ಪ್ರಧಾನಿಯನ್ನಾಗಿ ಮಾಡಬೇಕು.‌ 2014ರಲ್ಲಿ ಮೋದಿ ಪ್ರಧಾನಿ ಆದಾಗ ಭಾರತದ ಆಡಳಿತ ವ್ಯವಸ್ಥೆ ಭ್ರಷ್ಟಾಚಾರದಿಂದ ಕುಡಿತ್ತು. ಆದರೆ, ಮೊದಿಯವರು ಪ್ರಧಾನಿಯಾದ ಬಳಿಕ ಅವರು ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಆಡಳಿತ ನಡೆಸಿದರು ಹಾಗಾಗಿ ಮೊದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನನ್ನನ್ನು ಗೆಲ್ಲಿಸಿ, ಲೋಕಸಭೆಗೆ ಕಳುಹಿಸಬೇಕು ಎಂದು ಮನವಿ ಮಾಡಿದರು.‌

ಈ ಸಂದರ್ಭದಲ್ಲಿ ಪ್ರಮುಖರಾದ ವಿನೋದ ದೊಡ್ಡಣ್ಣವರ, ಡಾ.ಸಾವಿತ್ರಿ ದೊಡ್ಡಣ್ಣವರ, ಶ್ರೀಕಾಂತ ಕಮಲೆಪುರ, ಚಂದು ಕಲ್ಲಮನಿ, ಅಶೋಕ ದನವಾಡೆ, ದೇವಿಂದ್ರ ದೇಸಾಯಿ ಹಾಗೂ ಇತರರು ಉಪಸ್ಥಿತರಿದ್ದರು.