ಮೃದು ಕೌಶಲ್ಯಗಳು ಬದುಕಿಗೆ ಅಗತ್ಯ: ಡಾ. ಗಣನಾಥ ಎಕ್ಕಾರು

| Published : May 08 2024, 01:01 AM IST

ಮೃದು ಕೌಶಲ್ಯಗಳು ಬದುಕಿಗೆ ಅಗತ್ಯ: ಡಾ. ಗಣನಾಥ ಎಕ್ಕಾರು
Share this Article
  • FB
  • TW
  • Linkdin
  • Email

ಸಾರಾಂಶ

ರೆಡ್‌ಕ್ರಾಸ್ ಭವನದಲ್ಲಿ ನಡೆದ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಕೌಶಲ್ಯಗಳು ಮನುಷ್ಯ ಬದುಕಿನುದ್ದಕ್ಕೂ ಅವರನ್ನು ರಕ್ಷಿಸುತ್ತದೆ, ಅದರಲ್ಲೂ ಮೃದು ಕೌಶಲ್ಯಗಳು ಇಂದಿನ ಜೀವನದಲ್ಲಿ ಅತೀ ಅಗತ್ಯವಾಗಿದೆ. ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಈ ಕೌಶಲ್ಯಗಳನ್ನು ಕಲಿಸುತ್ತದೆ ಎಂದು ರಾಜ್ಯ ಎನ್. ಎಸ್.ಎಸ್. ನಿವೃತ್ತ ಅಧಿಕಾರಿ ಮತ್ತು ಸರ್ಕಾರದ ಪದನಿಮಿತ್ತ ಜಂಟಿ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದರು.

ಅವರು ರೆಡ್‌ಕ್ರಾಸ್ ಭವನದಲ್ಲಿ ನಡೆದ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಮಾರೋಪ ಭಾಷಣ ಮಾಡಿದರು.

ಕಾಲೇಜು ಪ್ರಾಂಶುಪಾಲ ಡಾ. ದೇವಿದಾಸ ಪ್ರಭು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಡಾ. ಜಿ.ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಮತ್ತು ಎಂ.ಜಿ.ಎಂ. ಕಾಲೇಜಿನ ಕೌಶಲ್ಯ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕ ಟಿ. ರಂಗ ಪೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವಿದ್ಯಾರ್ಥಿನಿ ದೀಕ್ಷಿತಾ ಸ್ವಾಗತಿಸಿದರು. ಎನ್.ಎಸ್.ಎಸ್. ಸಂಯೋಜನಾಧಿಕಾರಿ ಸನತ್ ಕೋಟ್ಯಾನ್ ಶಿಬಿರದ ವರದಿ ವಾಚಿಸಿದರು. ಶಿಬಿರಾರ್ಥಿಗಳಾದ ಸಾತ್ವಿಕ್ ಹಾಗೂ ಅಂಜಲಿ ಶಿಬಿರದ ಅನುಭವವನ್ನು ವಿವರಿಸಿದರು. ರಕ್ಷಿತಾ ವಂದಿಸಿದರು. ಪ್ರಣತಿ ಕಾರ್ಯಕ್ರಮ ನಿರೂಪಿಸಿದರು.

ಉಪನ್ಯಾಸಕರಾದ ಡಾ. ಪ್ರಸಾದ್ ರಾವ್ ಎಂ., ಡಾ. ನಿಕೇತನ, ಡಾ. ಕೀರ್ತಿ, ಪ್ರೊ. ಸುರೇಂದ್ರ ಶೆಟ್ಟಿ ಕೊಕ್ಕರ್ಣೆ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಬೀಚ್ ಸ್ವಚ್ಛತೆ, ಸ್ವಚ್ಛತಾ ಕಾರ್ಯಕ್ರಮ ವಿವಿಧ ಶ್ರಮದಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.