'ಹಾಸನದಲ್ಲಿ ಬಿಜೆಪಿ, ಮಂಡ್ಯದಲ್ಲಿ ಸುಮಲತಾರಿಂದ ಸಿಗುತ್ತಿಲ್ಲ ಸಹಕಾರ"

| Published : Apr 25 2024, 01:04 AM IST / Updated: Apr 25 2024, 07:01 AM IST

'ಹಾಸನದಲ್ಲಿ ಬಿಜೆಪಿ, ಮಂಡ್ಯದಲ್ಲಿ ಸುಮಲತಾರಿಂದ ಸಿಗುತ್ತಿಲ್ಲ ಸಹಕಾರ"
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಕೆಲ ವ್ಯಕ್ತಿಗಳು ಹಾಸನದಲ್ಲಿ ಮತ್ತು ಮಂಡ್ಯದಲ್ಲಿ ಸುಮಲತಾ ಜೆಡಿಎಸ್‌ಗೆ ಸಹಕಾರ ನೀಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದರು. ಹಾಸನದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.

 ಹಾಸನ :  ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಕೆಲ ವ್ಯಕ್ತಿಗಳು ಹಾಸನದಲ್ಲಿ ಮತ್ತು ಮಂಡ್ಯದಲ್ಲಿ ಸುಮಲತಾ ಜೆಡಿಎಸ್‌ಗೆ ಸಹಕಾರ ನೀಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಬುಧವಾರ ಮಾಧ್ಯಮದೊಂದಿಗೆ ಮಾತನಾಡಿ, ‘ಹಾಸನದಲ್ಲಿ ಬಿಜೆಪಿಯ ಒಬ್ಬರು ವಿರೋಧ ಮಾಡುತ್ತಾರೆ ಅಂತ ನೀವು ಕೇಳಬಹುದು. ನಾನೇ ಹೇಳ್ತೀನಿ! ಇವತ್ತು ಕಾವೇರಿ ಬೇಸಿನ್‌ನಲ್ಲಿ ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿಯ ಕೆಲವು ವ್ಯಕ್ತಿಗಳು ಹಾಸನದಲ್ಲಿ ಸಹಕಾರ ನೀಡ್ತಿಲ್ಲ. ಮಂಡ್ಯದಲ್ಲಿ ಸುಮಲತಾ ಕುಮಾರಸ್ವಾಮಿಗೆ ಸಹಕಾರ ನೀಡ್ತಿಲ್ಲ’ ಎಂದು ಹೇಳಿದರು.

ದೇಶದ ಸಂಪತ್ತನ್ನು ಅಲ್ಪಸಂಖ್ಯಾತರಿಗೆ ಹಂಚುತ್ತೇವೆ ಎಂದು ಕಾಂಗ್ರೆಸ್‌ನವರು ಜಗಳವಾಡುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಶಕ್ತಿಯೇ ಇಲ್ಲ. ಆದರೆ ಮನಸ್ಸಿಗೆ ಬಂದಂತೆ ಮಾತನಾಡುತ್ತಾರೆ. ಭೂಮಿ, ಸಂಪತ್ತನ್ನು ಹಂಚುತ್ತೇವೆ ಎಂದು ರಾಹುಲ್ ಗಾಂಧಿ ಹೇಳುತ್ತಾರೆ. ಕಾವೇರಿ ಕಣಿವೆಗೆ ಸಂಬಂಧಪಟ್ಟ ಎಲ್ಲಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೇನೆ. ಪ್ರಧಾನ ಮಂತ್ರಿಗಳ ಜತೆ ಎರಡು ಸಭೆ ಮಾಡಿದ್ದೇನೆ. ಎರಡನೇ ಹಂತದ ಚುನಾವಣೆ ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕದಲ್ಲಿ ಮೇ.7  ರಂದು ನಡೆಯಲಿದೆ. ಶಿವಮೊಗ್ಗ ಸೇರಿ ಎರಡನೇ ಹಂತದ ಚುನಾವಣೆ ನಡೆಯುತ್ತದೆ ಎಂದು ತಿಳಿಸಿದರು.

‘ಕುಮಾರಸ್ವಾಮಿಗೆ ಏನೋ ಅಪಾಯ ಆಗುತ್ತೆ ಅಂತಿದ್ದಾರೆ. ಏನು ಆಗಲ್ಲ. ಪ್ರಮುಖವಾಗಿ ಕಾವೇರಿ ಸಮಸ್ಯೆ ಇದೆ. ಅದು ಜೀವನ್ಮರಣದ ಪ್ರಶ್ನೆ. ಮಂಡ್ಯದಲ್ಲಿ ಕೈ ಅಭ್ಯರ್ಥಿ ಗೆಲ್ಲಲು 125 ಕೋಟಿ ಎನ್‌ಒಸಿ ರಿಲೀಸ್ ಮಾಡಿದ್ದಾರೆ. ರಾಜ್ಯದಲ್ಲಿ 28ಕ್ಕೆ 28  ಸ್ಥಾನ ಗೆಲ್ಲುಬೇಕು. ಯಾರೇ ಪ್ರಚಾರ, ಅಪಪ್ರಚಾರ ಏನೇ ಮಾಡಲಿ ಈ ದೇವೇಗೌಡ 91 ನೇ ವಯಸ್ಸಿನಲ್ಲಿ ಹೋರಾಟ ಮಾಡುತ್ತಿದ್ದಾನೆ. ಅದು ಎಲ್ಲರ ಮನಸ್ಸಿಗೆ ನಾಟಿದೆ. ಮೋದಿಯವರು ಡಿಎಂಕೆಯ ಹಂಗಿನಿಂದ ಈ ದೇಶ ಆಳುವ ಪರಿಸ್ಥಿತಿ ಬರುವುದಿಲ್ಲ. ಮೇಕೆದಾಟು ಯೋಜನೆ ಬಗ್ಗೆ ಡಿಎಂಕೆ ಪ್ರಣಾಳಿಕೆಯಲ್ಲಿ ಹಾಕಿದೆ. ಒಬ್ಬ ಪೊಲೀಸ್ ಅಧಿಕಾರಿ ತಮಿಳುನಾಡಿನ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹೋರಾಡುತ್ತಿದ್ದಾರೆ. ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯುವುದರಲ್ಲಿ ಯಾವುದೇ ಸಂಶಯವಿಲ್ಲ. ಚಿಕ್ಕಬಳ್ಳಾಪುರದಲ್ಲಿ ನೀರಿನ ಸಮಸ್ಯೆ ಅರ್ಥ ಆಗಿದೆ’ ಎಂದು ಹೇಳಿದರು.

‘ನಾನು ಗಮನಹರಿಸುತ್ತೇನೆ ಎಂದು ಪ್ರಧಾನಮಂತ್ರಿಗೂ ಹೇಳಿದ್ದೇನೆ. ಮೇಕೆದಾಟು, ಕಾವೇರಿ ಬಗ್ಗೆ ಕೇಂದ್ರ ಜಲಸಂಪನ್ಮೂಲ ಸಚಿವರ ಜೊತೆ ಮಾಡುತ್ತಿದ್ದೇನೆ. ಅವರು ಏನು ಹೇಳಿದ್ದಾರೆ ಎನ್ನುವುದನ್ನು ಮಾಧ್ಯಮದ ಮುಂದೆ ಹೇಳಲ್ಲ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೋದಲ್ಲೆಲ್ಲ ಜನರಿಗೆ ಅವರು ಹಣದ ಹೊಳೆಯನ್ನು ಹರಿಸುತ್ತಿದ್ದಾರೆ. ಮೂವರು ಇದ್ದರೂ ಡಾ.ಮಂಜುನಾಥ್ ಗೆಲ್ತಾರೆ. ಯಾವ ಕಾವೇರಿ ನೀರನ್ನು ಉಳಿಸುತ್ತೇನೆ ಎಂದು ಹೇಳಿದ್ದೇನೋ ಅದನ್ನು ಮಾಡುತ್ತೇನೆ. ಅದು ಶತಸಿದ್ದ’ ಎಂದು ಹೇಳಿದರು.

ಹುಡಾ ಮಾಜಿ ಅಧ್ಯಕ್ಷ ಕೆ.ಎಂ.ರಾಜೇಗೌಡ, ಮಾಜಿ ಶಾಸಕ ಬಿ.ವಿ.ಕರೀಗೌಡ, ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ರಘುಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಅನಂತಕುಮಾರ್ ಇದ್ದರು.