ಪುತ್ತೂರು ಶ್ರೀ ಮಹಾಲಿಂಗೇಶ್ವ ದೇವಳಕ್ಕೆ ಶೃಂಗೇರಿ ಜಗದ್ಗುರು ಭೇಟಿ

| Published : Apr 28 2024, 01:17 AM IST

ಪುತ್ತೂರು ಶ್ರೀ ಮಹಾಲಿಂಗೇಶ್ವ ದೇವಳಕ್ಕೆ ಶೃಂಗೇರಿ ಜಗದ್ಗುರು ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಶೃಂಗೇರಿ ಮಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ದೇವಸ್ಥಾನದ ಗರ್ಭಗುಡಿ ಬಳಿ ಇರುವ ಶಿಲಾ ಶಾಸನವನ್ನು ವೀಕ್ಷಿಸಿದರು.

ಕನ್ನಡಪ್ರಭ ವಾರ್ತೆ ಪುತ್ತೂರು

ಶೃಂಗೇರಿ ಮಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಇಲ್ಲಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಅವರು ದೇವಸ್ಥಾನದ ಗರ್ಭಗುಡಿ ಬಳಿ ಇರುವ ಶಿಲಾ ಶಾಸನವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ನಿಕಟಪೂರ್ವ ಸದಸ್ಯರಾದ ಬಿ.ಐತ್ತಪ್ಪ ನಾಯ್ಕ, ರಾಮದಾಸ್ ಗೌಡ, ಅಂಬಿಕಾ ಮಹಾವಿದ್ಯಾಲಯದ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ನ್ಯಾಯವಾದಿ ಮಹೇಶ್ ಕಜೆ, ದಿನೇಶ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.