ಕಲಬುರಗಿ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ರಾಧಾಕೃಷ್ಣ

| Published : Apr 28 2024, 01:17 AM IST

ಕಲಬುರಗಿ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ರಾಧಾಕೃಷ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಯರಗೋಳ: ಕಲಬುರಗಿ ಕಾಂಗ್ರೆಸ್‌ ಅಭ್ಯರ್ಥಿ ಚುನಾವಣೆ ಪ್ರಚಾರ

ಕನ್ನಡಪ್ರಭ ವಾರ್ತೆ ಯಾದಗಿರಿ ಕಲಬುರಗಿ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲಿಸಿ ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮತದಾರರಲ್ಲಿ ಕೋರಿದರು.ಗುರುಮಠಕಲ್ ಮತಕ್ಷೇತ್ರದ ಯರಗೋಳ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ, ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮನೋಭಾವನೆ ತೋರಿದೆ. ಕಲಬುರಗಿ ಕ್ಷೇತ್ರ ಇಡೀ ದೇಶದ ಗಮನ ಸೆಳೆದಿದೆ, ನನಗೆ ಮತ ನೀಡುವ ಮೂಲಕ ಖರ್ಗೆ ಹಾಗೂ ಕಾಂಗ್ರೆಸ್‌ ಪಕ್ಷದ ಶಕ್ತಿ ಬಲಪಡಿಸಬೇಕು ಎಂದು ಮನವಿ ಮಾಡಿದರು.

ಕಳೆದ 50 ವರ್ಷಗಳಿಂದ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಈ ಭಾಗದ ಮತದಾರರು ಬೆಂಬಲಿಸಿದ್ದೀರಿ. ಅದೇ ರೀತಿ ಈ ಬಾರಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ನೀವೆಲ್ಲರು ನನಗೆ ಮತ ನೀಡಿ ಆರ್ಶಿವದಿಸಬೇಕು. ನಿಮ್ಮೆಲ್ಲರ ದ್ವನಿಯಾಗಿ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ ಎಂದರು. ಈ ಬಾರಿಯ ಚುನಾವಣೆ ಸತ್ಯ ಮತ್ತು ಸುಳ್ಳಿನ ನಡುವೆ ನಡೆಯುತ್ತಿದೆ, ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಿ, ಮತದಾರರು ಕೂಡ ಕೆಲಸ ಮಾಡುವ ಪಕ್ಷದ ಅಭ್ಯರ್ಥಿಗೆ ಮತ ನೀಡಿದಲ್ಲಿ ಮಾತ್ರ ಬದಲಾವಣೆ ಕಾಣಲು ಸಾದ್ಯ ಎಂದು ತಿಳಿಸಿದರು.ಕಾಂಗ್ರೆಸ್ ಪಕ್ಷದ ನಾಯಕ ಶರಣಪ್ಪ ಮಾನೇಗಾರ ಮಾತನಾಡಿ, ರಾಜ್ಯದಲ್ಲಿ ಈ ಹಿಂದೆ 5 ವರ್ಷ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರದ ದುರಾಡಳಿತದಿಂದ ಬೇಸತ್ತು ಜನರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿ ಅಧಿಕಾರಕ್ಕೆ ತಂದಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ಚುನಾವಣೆ ಸಮಯದಲ್ಲಿ ಜನರಿಗೆ ನೀಡಿರುವ ಬರವಸೆ ಈಡೇರಿಸಿದ್ದಾರೆ, ನಾವು ಅಭಿವೃದ್ಧಿ ಹೆಸರಿನಲ್ಲಿ ಮತ ಕೇಳುತ್ತಿದ್ದೇವೆ ಆದರೆ ಬಿಜೆಪಿಯವರು ಧರ್ಮದ ಆಧಾರದ ಮೇಲೆ ಮತ ಕೇಳುತ್ತಿದ್ದಾರೆ. ಮತದಾರರು ಕೆಲಸ ಮಾಡುವ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಹೇಳಿದರು.ಈ ವೇಳೆ ತೆಲಂಗಾಣ ಕಾಂಗ್ರೆಸ್‌ ಶಾಸಕ ಲಕ್ಷ್ಮೀಕಾಂತರಾವ್, ಪಕ್ಷದ ಮುಖಂಡರಾದ ಸಿದ್ಧಲಿಂಗರೆಡ್ಡಿ ಉಳ್ಳೆಸುಗೂರ, ಗುರುಮಠಕಲ್ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೃಷ್ಣ ಚಪೇಟ್ಲಾ, ಶರಣಿಕ್‌ಕುಮಾರ ದೋಕಾ, ಚಂದ್ರಶೇಖರ ವಾರದ, ಸೂರ್ಯಕಾಂತ ಅಲ್ಲಿಪೂರ, ರಾಜುಗೌಡ ಅರಕೇರಾ (ಬಿ), ಬಸವರಾಜ ಬಾಚವಾರ, ದೇವಿಂದ್ರಪ್ಪ ಅರಕೇರಾ, ಅಯ್ಯಣ್ಣ ಠಾಣಗುಂದಿ, ಚಂದ್ರಕಾಂತ ಕವಲ್ದಾರ ಹತ್ತಿಕುಣಿ, ಭೀಮರಾಯ ಠಾಣಗುಂದಿ, ಕಿಷನ್ ರಾಠೋಡ್, ಬಸವರಾಜಪ್ಪ ಬಂಡಿ, ಸಾಹೇಬಗೌಡ ಗಾಂಪಲ್ಲಿ, ಶರಣಪ್ಪ ಕೋಲ್ಕರ್, ಯಂಕಾರಡ್ಡಿ ಮಾನೇಗಾರ, ಮಲ್ಲು ಕುಂಬಾರಳ್ಳಿ. ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.