ಸೋಲು ಗೆಲುವಿನ ಲೆಕ್ಕಾಚಾರ ಜೋರು

| Published : May 09 2024, 01:06 AM IST

ಸಾರಾಂಶ

ಈ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಬಾಜಿ ಕಟ್ಟುವುದು ಕೂಡ ಆರಂಭವಾಗಿದೆ. ಕೆಲವಡೆ ಎನ್ ಡಿಎ ಅಭ್ಯರ್ಥಿ ಪರ ದುಪ್ಪಟ್ಟು ಬಾಜಿ ಕಟ್ಟಿದ್ದರೆ ಕೆಲವಡೆ ಇಂಡಿಯಾ ಅಭ್ಯರ್ಥಿ ಪರ ದುಪ್ಪಟ್ಟು ಬಾಜಿ ಕಟ್ಟುತ್ತಿದ್ದಾರೆ

ಡಂಬಳ: ತೀವ್ರ ಹಣಾಹಣಿಗೆ ಕಾರಣವಾಗಿದ್ದ ಗದಗ- ಹಾವೇರಿ ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನೂ 27 ದಿನ ಬಾಕಿಯಿದ್ದು, ಕ್ಷೇತ್ರದ್ಯಾಂತ ಮತದಾನ ಮುಗಿದ ಬೆನ್ನಲ್ಲೇ ಅಭ್ಯರ್ಥಿಗಳ ಸೋಲು- ಗೆಲುವಿನ ಲೆಕ್ಕಾಚಾರ ಮತ್ತು ಬೆಂಬಲಿಗರ ಬಾಜಿ ಕಟ್ಟುವ ಪ್ರಕ್ರಿಯೆಗಳು ತಾರಕಕ್ಕೇರಿವೆ.

ಮತದಾನ ಮುಗಿದ ನಂತರ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ (ಇಂಡಿಯಾ ಮೈತ್ರಿ ಕೂಟ) ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ (ಎನ್ ಡಿಎ ಮೈತ್ರಿ ಕೂಟ) ಅಭ್ಯರ್ಥಿಗಳು, ಇತರೆ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು ಈಗಾಗಲೇ ಮತಗಟ್ಟೆವಾರು ಆಗಿರುವ ಮತದಾನ ವಿವರ ಕೈಯಲ್ಲಿ ಹಿಡಿದು ತಮಗೆ ಬರಬಹುದಾದ ಮತ ಮತ್ತು ತಮ್ಮಿಂದ ಯಾವ ಅಭ್ಯರ್ಥಿ ಸೋಲಲಿದ್ದಾರೆ ಎಂಬ ಲೆಕ್ಕಾಚಾರ ಆರಂಭಿಸಿದ್ದಾರೆ.

ಬೆಟ್ಟಿಂಗ್ ಬಲು ಜೋರು: ಈ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಬಾಜಿ ಕಟ್ಟುವುದು ಕೂಡ ಆರಂಭವಾಗಿದೆ. ಕೆಲವಡೆ ಎನ್ ಡಿಎ ಅಭ್ಯರ್ಥಿ ಪರ ದುಪ್ಪಟ್ಟು ಬಾಜಿ ಕಟ್ಟಿದ್ದರೆ ಕೆಲವಡೆ ಇಂಡಿಯಾ ಅಭ್ಯರ್ಥಿ ಪರ ದುಪ್ಪಟ್ಟು ಬಾಜಿ ಕಟ್ಟುತ್ತಿದ್ದಾರೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಲಕ್ಷಾಂತರ ಬೆಟ್ಟಿಂಗ್ ಕಟ್ಟುತ್ತಿದ್ದಾರೆ. ಹಣ, ಬೈಕ್, ಮನೆ ಪಣಕ್ಕಿಟ್ಟಿರುವ ಉದಾಹರಣೆಗಳೂ ಕೇಳಿಬರುತ್ತಿವೆ. ಗ್ರಾಮಾಂತರ ಪ್ರದೇಶಗಳಲ್ಲಿ ಜಮೀನು, ಟ್ರ್ಯಾಕ್ಟರ್, ಕಾರು, ಜಾನುವಾರು ಪಣಕ್ಕಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಕ್ಷೇತ್ರದ ಒಟ್ಟಾರೆ ಮತದಾನ ಪ್ರಮಾಣ ಕ್ಷೇತ್ರದಲ್ಲಿರುವ ಜಾತಿವಾರು ಮತದಾರರ ಪ್ರಮಾಣ ಉಲ್ಲೇಖೀಸಿಕೊಂಡು ಈ ಪಕ್ಷದ ಅಭ್ಯರ್ಥಿ ಇಷ್ಟೇ ಮತ ಪಡೆಯುತ್ತಾರೆಂದು ಹೇಳುವ ಮೂಲಕ ತಮ್ಮ ತಮ್ಮ ಅಭ್ಯರ್ಥಿಗಳ ಗೆಲುವಿನ ಬಗ್ಗೆ ರಾಜಕೀಯ ಪಕ್ಷಗಳ ಬೆಂಬಲಿಗರು ವಿಶ್ವಾಸದಿಂದ ಹೇಳಿಕೊಳ್ಳುವ ಮೂಲಕ ಸೋಲು, ಗೆಲುವಿನ ಲೆಕ್ಕಾಚಾರದಲ್ಲಿ ಮುಳಗಿ ಬಾಜಿ ಕಟ್ಟುತ್ತಿದ್ದು, ಯಾರೇ ಗೆಲ್ಲಲಿ, ಯಾರೇ ಸೋಲಲಿ ಒಂದು ಕಡೆಯ ಬೆಂಬಲಿಗರಂತು ಬೀದಿಗೆ ಬೀಳುವುದಂದು ನಿಶ್ಚಿತ