ನಾಳೆ ಸರಳವಾಗಿ ಜಗಜ್ಯೋತಿ ಬಸವೇಶ್ವರ, ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

| Published : May 09 2024, 12:46 AM IST

ನಾಳೆ ಸರಳವಾಗಿ ಜಗಜ್ಯೋತಿ ಬಸವೇಶ್ವರ, ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿವುದರಿಂದ ಆಯೋಗದ ಆದೇಶದಂತೆ ಜಯಂತಿ ಕಾರ್ಯಕ್ರಮಗಳನ್ನು ಸರಳವಾಗಿ ಮಾಡಬೇಕಿದ್ದು, ಇದಕ್ಕೆ ಸರ್ವರೂ ಸಹಕಾರ ನೀಡಬೇಕು ಎಂದು ತಹಸೀಲ್ದಾರರು ಮನವಿ ಮಾಡಿದರಲ್ಲದೆ, ಜತೆಗೆ ಮೇ 12ರಂದು ಶಂಕರಾಚಾರ್ಯ ಮತ್ತು 14 ರಂದು ಭಗೀರಥ ಜಯಂತಿಯನ್ನು ತಾಲೂಕು ಕಚೇರಿಯ ಆವರಣದಲ್ಲಿ ಆಚರಣೆ ಮಾಡಲಾಗುತ್ತದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ನಗರ

ಮೇ 10 ರಂದು ಶುಕ್ರವಾರ ಜಗಜ್ಯೋತಿ ಬಸವೇಶ್ವರ ಮತ್ತು ಹೇಮಾರೆಡ್ಡಿ ಮಲ್ಲಮ್ಮನವರ ಜಯಂತಿಯನ್ನು ಪಟ್ಟಣದ ಬಸವೇಶ್ವರ ಬಡಾವಣೆಯ ಮಹದೇಶ್ವರ ದೇವಾಲಯದ ಆವರಣದಲ್ಲಿ ಸರಳವಾಗಿ ಆಚರಣೆ ಮಾಡಲು ತೀರ್ಮಾನ ಮಾಡಲಾಯಿತು.

ಇಲ್ಲಿನ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಸಿ.ಎಸ್. ಪೂರ್ಣಿಮಾ ಅವರ ಅಧ್ಯಕ್ಷತೆ ಹಾಗೂ ಎಲ್ಲ ಸಮಾಜಗಳ ಪ್ರಮುಖರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಮಾಡಲಾಯಿತು.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿವುದರಿಂದ ಆಯೋಗದ ಆದೇಶದಂತೆ ಜಯಂತಿ ಕಾರ್ಯಕ್ರಮಗಳನ್ನು ಸರಳವಾಗಿ ಮಾಡಬೇಕಿದ್ದು, ಇದಕ್ಕೆ ಸರ್ವರೂ ಸಹಕಾರ ನೀಡಬೇಕು ಎಂದು ತಹಸೀಲ್ದಾರರು ಮನವಿ ಮಾಡಿದರಲ್ಲದೆ, ಜತೆಗೆ ಮೇ 12ರಂದು ಶಂಕರಾಚಾರ್ಯ ಮತ್ತು 14 ರಂದು ಭಗೀರಥ ಜಯಂತಿಯನ್ನು ತಾಲೂಕು ಕಚೇರಿಯ ಆವರಣದಲ್ಲಿ ಆಚರಣೆ ಮಾಡಲಾಗುತ್ತದೆ ಎಂದರು.

ಎಲ್ಲ ಜಯಂತಿಗಳ ಆಚರಣೆಗೆ ಸರ್ಕಾರದಿಂದ ತಲಾ 1.5 ಸಾವಿರ ರು. ಹಣ ಬಿಡುಗಡೆಯಾಗಲಿದ್ದು, ಈ ಹಣದಲ್ಲಿ ನಾವು ಕಾರ್ಯಕ್ರಮದ ಮಾಡಬೇಕು ಎಂದು ಅವರು ಸಭೆಗೆ ಮಾಹಿತಿ ನೀಡಿದರು.

ಜಿಪಂ ಮಾಜಿ ಉಪಾಧ್ಯಕ್ಷ ಎ.ಎಸ್. ಚನ್ನಬಸಪ್ಪ ಮಾತನಾಡಿ, ಸರ್ಕಾರದಿಂದ ನೀಡುವ 1.5 ಸಾವಿರ ಹಣ ನಮಗೆ ಬೇಕಾಗಿಲ್ಲ, ಹಾಗಾಗಿ ನಾವುಗಳೆ ಬಸವ ಜಯಂತಿಗೆ ತಗಲುವ ವೆಚ್ಚ ಭರಿಸಲಿದ್ದು, ಇದಕ್ಕೆ ತಾಲೂಕು ಆಡಳಿತ ಸಹಕಾರ ನೀಡಬೇಕು ಎಂದಾಗ ಸಭೆಯು ಇದಕ್ಕೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿತು.

ಅಖಿಲ ಭಾರತ ವೀರಶೈವ ಮಹಾ ಸಭಾದ ತಾಲೂಕು ಘಟಕದ ಅಧ್ಯಕ್ಷ ಕೆಂಪರಾಜು, ತಾಲೂಕು ನಿವೃತ್ತ ನೌಕರರ ಸಂಘದ ಮಾಜಿ ಅಧ್ಯಕ್ಷ ಸಣ್ಣಲಿಂಗಪ್ಪ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ, ತಾಲೂಕು ಉಪ್ಪಾರರ ಸಂಘದ ಅಧ್ಯಕಗಚ ಮಹದೇವು, ನಗರಾಧ್ಯಕ್ಷ ಸೋಮಣ್ಣ, ಉಪಾಧ್ಯಕ್ಷ ರಾಮಕೃಷ್ಣ, ತಾಲೂಕು ಆರೋಗ್ಯಾಧಿಕಾರಿ ಡಾ.ಡಿ. ನಟರಾಜು, ಸಹಾಯಕ ಪಶು ನಿರ್ದೇಶಕ ಡಾ. ಮಂಜುನಾಥ್, ಸಹಾಯಕ ಕೃಷಿ ನಿರ್ದೇಶಕ ಕೆ.ಜೆ. ಮಲ್ಲಿಕಾರ್ಜುನ, ಸಿಡಿಪಿಒ ಅಣ್ಣಯ್ಯ, ಶಿರಸ್ತೇದಾರ್ ಅಸ್ಲಾಂಬಾಷಾ, ಪುರಸಭೆ ವ್ಯವಸ್ಥಾಪಕಿ ಸುಧಾಮಣಿ, ತಾಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ವಿ. ರಮೇಶ್, ತಾಲೂಕು ಕಚೇರಿಯ ಸಿಬ್ಬಂದಿ ಸಣ್ಣಸ್ವಾಮಿ, ಯಶವಂತ್ ಇದ್ದರು.

ಬಸವ ಕೇಂದ್ರದಲ್ಲಿ ನಾಳೆ ಬಸವ ಜಯಂತಿಕನ್ನಡಪ್ರಭ ವಾರ್ತೆ ಮೈಸೂರು

ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಮೇ 10 ರಂದು ಬೆಳಗ್ಗೆ 11ಕ್ಕೆ ಅಗ್ರಹಾರದ ಬಸವೇಶ್ವರ ರಸ್ತೆ ಬಸವ ಕೇಂದ್ರದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.ಹೊಸಮಠದ ಶ್ರೀ ಚಿದಾನಂದಸ್ವಾಮೀಜಿ ಅವರು ಷಟಸ್ಥಳ ಧ್ವಜಾರೋಹಣ ನೆರವೇರಿಸುವರು. ಡಾ. ಶರತ್ ಚಂದ್ರಸ್ವಾಮೀಜಿ ವಿಷಯಾವಲೋಕನ ಮಾಡುವರು. ಶಾಸಕ ಟಿ.ಎಸ್. ಶ್ರೀವತ್ಸ ಅಧ್ಯಕ್ಷತೆ ವಹಿಸುವರು ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಮಹಾದೇವಪ್ಪ ಸುದ್ದಿಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು, ನಗರ ಪಾಲಿಕೆ ಆಯುಕ್ತೆ ಡಾ.ಎನ್.ಎನ್. ಮಧು, ಕಬಿನಿ ಜಲಾಶಯ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ ಸುಪ್ರಿಯಾ ಬಣಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್, ನಗರ ಪಾಲಿಕೆ ಮಾಜಿ ಸದಸ್ಯೆ ಸೌಮ್ಯಾ ಉಮೇಶ್ ಅತಿಥಿಗಳಾಗಿ ಪಾಲ್ಗೊಳ್ಳುವರು.ಬಸವೇಶ್ವರರು 12ನೇ ಶತಮಾನದಲ್ಲಿಯೇ ವರ್ಗರಹಿತ, ವರ್ಣರಹಿತ ಸಮಾಜ ನಿರ್ಮಾಣಕ್ಕಾಗಿ ಅವಿರತ ಶ್ರಮಿಸಿದರು. ಶೋಷಿತ ಸಮಾಜದ ನೇತಾರರಾಗಿ ಶೋಷಣೆ ವಿರುದ್ಧ ಹೋರಾಡಿ ಸಮಾನತೆಯ ಸಂದೇಶ ಸಾರಿದರು. ಹೀಗಾಗಿ ಅವರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಎಲ್. ಶಿವಲಿಂಗಪ್ಪ, ನಾಗರತ್ನಮ್ಮ, ಗಂಗಾಧರ ಸ್ವಾಮಿ, ಶಿವಮಲ್ಲಪ್ಪ, ಜ್ಯೋತಿ ರೇಚಣ್ಣ ಇದ್ದರು.