ದೋಣಿ ವಿಹಾರ ನಡೆಸಿ ಮತದಾನ ಜಾಗೃತಿ

| Published : Apr 28 2024, 01:17 AM IST

ಸಾರಾಂಶ

ಮತದಾರರಲ್ಲಿ ಜಾಗೃತಿ ಮೂಡಿಸಲು ವಿವಿಧ ಚಟುವಟಿಕೆ ಹಮ್ಮಿಕೊಂಡಿರುವ ಜಿಲ್ಲಾ ಸ್ವೀಪ್ ಸಮಿತಿಯು ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಂಪಳ್ಲಿ ಜಲಾಶಯದಲ್ಲಿ ದೋಣಿವಿಹಾರ ಮಾಡುವ ಮೂಲಕ ವಿನೂತನವಾಗಿ ಮತದಾರರ ಜಾಗೃತಿ ಮೂಡಿಸಲು ಪ್ರಯತ್ನಿಸಿತು.

ಕನ್ನಡಪ್ರಭ ವಾರ್ತೆ ಕಲಬುರಗಿ

ಗುಲ್ಬರ್ಗ ಲೋಕಸಭೆ ಚುನಾವಣೆಗೆ ಮೇ 7ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ವಿವಿಧ ಚಟುವಟಿಕೆ ಹಮ್ಮಿಕೊಂಡಿರುವ ಜಿಲ್ಲಾ ಸ್ವೀಪ್ ಸಮಿತಿಯು ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಂಪಳ್ಲಿ ಜಲಾಶಯದಲ್ಲಿ ದೋಣಿವಿಹಾರ ಮಾಡುವ ಮೂಲಕ ವಿನೂತನವಾಗಿ ಮತದಾರರ ಜಾಗೃತಿ ಮೂಡಿಸಲು ಪ್ರಯತ್ನಿಸಿತು.

ಜಿಲ್ಲಾ ಪಂಚಾಯತ್ ಸಿ.ಇ.ಓ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಭಂವರ್ ಸಿಂಗ್ ಮೀನಾ ಮತ್ತು ಕಲಬುರಗಿ ವೃತ್ತದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮೀಡಿಯಾ ಮಾನಿಟರ್ ಉಸ್ತುವಾರಿ ಅಧಿಕಾರಿ ಸುಮಿತಕುಮಾರ ಪಾಟೀಲ್ ನೇತೃತ್ವದ ಅಧಿಕಾರಿಗಳ ತಂಡವು ಲೈಫ್ ಜಾಕೆಟ್ ಹಾಕಿಕೊಂಡು ಕೈಯಲ್ಲಿ ಭಿತ್ತಿಪತ್ರ ಹಿಡಿದು ಬರತಕ್ಕಂತಹ ಲೊಕಸಭೆ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಹೇಳಿದರು.

ಇದಕ್ಕೂ ಮುನ್ನ ಕುಂಚಾವರಂ ಗ್ರಾಮ ಪಂಚಾಯತಿ ವ್ಯಾಪ್ತಿಯ ನರೇಗಾ ಕಾಮಗಾರಿ ಸ್ಥಳಕ್ಕೂ ಭೇಟಿ ನೀಡಿದ ಸ್ವೀಪ್ ತಂಡ ಕೂಲಿ ಕಾರ್ಮಿಕರಿಗೆ ಮತದಾನ ಕುರಿತು ಜಾಗೃತಿ ಮೂಡಿಸಿತು.

ತಾಲೂಕು ಪಂಚಾಯ್ತಿ ಇಒ ಶಂಕರ ರಾಠೋಡ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹ್ಮದ್ ಮುನೀರ್, ಸಹಾಯಕ ನಿರ್ದೇಶಕ (ಗ್ರಾ.ಉ.) ಶಿವಶಂಕ್ರಯ್ಯ, ತಾಲ್ಲೂಕು ಯೋಜನಾಧಿಕಾರಿ ಮಲ್ಲಿಕಾರ್ಜುನ ಕಟ್ಟಿಮನಿ, ಪಿ.ಡಿ.ಓ ದಶರಥ ಪಾತ್ರೆ ಇದ್ದರು.