ಕನ್ನಡ ಅಸ್ಮಿತೆಯ ಸಾಕ್ಷಿ ಪ್ರಜ್ಞೆ ಡಾ.ರಾಜ್: ನರಸಿಂಹಮೂರ್ತಿ

| Published : Apr 27 2024, 01:16 AM IST

ಸಾರಾಂಶ

ತಾಲೂಕು ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಸುರೇಶ್‌ರಾವ್ ಮಾನೆ, ವಿ.ಪರಮೇಶ್, ಡಿ.ಎನ್.ತಿಮ್ಮರಾಜು, ಶಿವರಾಜ್‌ಕುಮಾರ್ ಕನ್ನಡ ಸೇನಾ ಸಮಿತಿ ಅಧ್ಯಕ್ಷ ಜೆ.ಆರ್.ರಮೇಶ್‌, ಜಿಲ್ಲಾಧ್ಯಕ್ಷ ಡಿ.ಸಿ.ಚೌಡರಾಜು, ಕನ್ನಡ ಸಂಘಟನೆಗಳ ಮುಖಂಡರಾದ ಟಿ.ಜಿ.ಮಂಜುನಾಥ್, ಮರುಳಾರಾಧ್ಯ, ಕೆಂಪರಾಜು ಸೇರಿದಂತೆ ಹಲವು ಅಭಿಮಾನಿಗಳು ಹಾಜರಿದ್ದರು.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ ನಗರಾದ್ಯಂತ ವರನಟ ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಬುಧವಾರ ಸಂಭ್ರಮದಿಂದ ಆಚರಿಸಲಾಯಿತು.

ಇಲ್ಲಿನ ಡಿಕ್ರಾಸ್‌ನ ಡಾ.ರಾಜ್‌ಕುಮಾರ್ ವೃತ್ತದಲ್ಲಿ ವರನಟನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ರಾಜ್ಯ ಸರ್ಕಾರ ಡಾ.ರಾಜ್‌ಕುಮಾರ್ ಅವರ ಜನ್ಮದಿನಾಚರಣೆಯನ್ನು ಕಳೆದ 6 ವರ್ಷದಿಂದ ಸರ್ಕಾರಿ ಆಚರಣೆಯಾಗಿ ನಡೆಸುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ತನ್ನ ಅಭಿನಯದ ಮೂಲಕ ಸಾಮಾಜಿಕ ಪಿಡುಗುಗಳ ವಿರುದ್ಧ ಜಾಗೃತಿ ಮೂಡಿಸಿದ ರಾಜ್‌ಕುಮಾರ್ ಸುಸಂಸ್ಕೃತ ಸಮಾಜ ನಿರ್ಮಾಣದ ಸಂದೇಶ ನೀಡಿದರು. ಯುವಜನತೆಗೆ ಅವರು ಹಾಕಿಕೊಟ್ಟ ಮಾರ್ಗದರ್ಶನ ಅನನ್ಯವಾದದ್ದು. ತನ್ನ ಪಾತ್ರದ ಮೂಲಕ ಸಾಮಾಜಿಕ ವ್ಯಕ್ತಿತ್ವವಾಗಿ ಬಿಂಬಿತವಾದ ಡಾ.ರಾಜ್ ಕನ್ನಡದ ಧೀಶಕ್ತಿಯಾಗಿದ್ದರು. ಕನ್ನಡದ ಮನಸ್ಸುಗಳನ್ನು ಬೆಸೆಯುವಲ್ಲಿ ಅವರ ಕೊಡುಗೆ ಅಪಾರ ಎಂದರು.

ತಾಲೂಕು ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಸುರೇಶ್‌ರಾವ್ ಮಾನೆ, ವಿ.ಪರಮೇಶ್, ಡಿ.ಎನ್.ತಿಮ್ಮರಾಜು, ಶಿವರಾಜ್‌ಕುಮಾರ್ ಕನ್ನಡ ಸೇನಾ ಸಮಿತಿ ಅಧ್ಯಕ್ಷ ಜೆ.ಆರ್.ರಮೇಶ್‌, ಜಿಲ್ಲಾಧ್ಯಕ್ಷ ಡಿ.ಸಿ.ಚೌಡರಾಜು, ಕನ್ನಡ ಸಂಘಟನೆಗಳ ಮುಖಂಡರಾದ ಟಿ.ಜಿ.ಮಂಜುನಾಥ್, ಮರುಳಾರಾಧ್ಯ, ಕೆಂಪರಾಜು ಸೇರಿದಂತೆ ಹಲವು ಅಭಿಮಾನಿಗಳು ಹಾಜರಿದ್ದರು.

ಇದಕ್ಕೂ ಮುನ್ನ ಇಲ್ಲಿನ ನೆಲದಾಂಜನೇಯಸ್ವಾಮಿ ದೇವಾಲಯದಲ್ಲಿ ಡಾ.ರಾಜ್‌ಕುಮಾರ್ ಅವರ ಹೆಸರಿನಲ್ಲಿ ವಿಶೇಷ ಪೂಜಾ ಕಾರ್‍ಯಕ್ರಮಗಳನ್ನು ನಡೆಸಲಾಯಿತು.

24ಕೆಡಿಬಿಪಿ2- ದೊಡ್ಡಬಳ್ಳಾಪುರದಲ್ಲಿ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ನೇತೃತ್ವದಲ್ಲಿ ನಡೆದ ಡಾ.ರಾಜ್‌ ಜನ್ಮದಿನ ಕಾರ್ಯಕ್ರಮದಲ್ಲಿ ಹಲವು ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡರು.