ಚಿತ್ರದುರ್ಗಕ್ಕಿಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ

| Published : Apr 23 2024, 12:56 AM IST

ಚಿತ್ರದುರ್ಗಕ್ಕಿಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ
Share this Article
  • FB
  • TW
  • Linkdin
  • Email

ಸಾರಾಂಶ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಏ.23ರ ಮಂಗಳವಾರ ಮಧ್ಯಾಹ್ನ 2.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಪಾಲ್ಗೊಳ್ಳುವರೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಚಿತ್ರದುರ್ಗ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಏ.23ರ ಮಂಗಳವಾರ ಮಧ್ಯಾಹ್ನ 2.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಪಾಲ್ಗೊಳ್ಳುವರೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಪರ ಒಲವಿದೆ. ಪ್ರಿಯಾಂಕಾ ಗಾಂಧಿ ಆಗಮನ ಮಹಿಳೆಯರಲ್ಲಿ ಸ್ವಾಭಿಮಾನ ಮೂಡಿಸಲಿದ್ದು, ಕಾಂಗ್ರೆಸ್ ಗೆಲವಿಗೆ ಸಹಕಾರಿಯಾಗಲಿದೆ ಎಂದರು.

ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ನೆಹರು ಕುಟುಂಬದ ಕೊಡುಗೆ ದೇಶಕ್ಕೆ ಅಪಾರವಾಗಿದೆ. ಕಾಂಗ್ರೆಸ್‍ಗೆ ತ್ಯಾಗ ಬಲಿದಾನಗಳ ಇತಿಹಾಸವಿದೆ. ದೇಶದ ಮುಂದಿನ ಭವಿಷ್ಯದ ನಾಯಕಿ ಪ್ರಿಯಾಂಕಾ ಗಾಂಧಿ ಮಂಗಳವಾರ ಚಿತ್ರದುರ್ಗಕ್ಕೆ ಆಗಮಿಸಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಪರ ಮತಯಾಚನೆ ಮಾಡುವರು. ಕಾಂಗ್ರೆಸ್‌ ಬಡವರಿಗೆ ಗ್ಯಾರೆಂಟಿಗಳನ್ನು ಕೊಟ್ಟಿದೆ. ಕಳೆದ ಹತ್ತು ವರ್ಷಗಳ ಕಾಲ ದೇಶದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಬೆಲೆ ಏರಿಕೆ ಮಾಡಿರುವುದೇ ಸಾಧನೆ ಎಂದು ವ್ಯಂಗ್ಯವಾಡಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿ ಲಕ್ಕಿ ಸ್ಟಾರ್ ಪ್ರಿಯಾಂಕಾ ಗಾಂಧಿ ಎಲ್ಲೆಲ್ಲಿ ಕಾಲಿಡುತ್ತಾರೋ ಅಲ್ಲೆಲ್ಲಾ ಕಾಂಗ್ರೆಸ್‍ಗೆ ಗೆಲುವು ಖಚಿತ. ಮೂರು ಲಕ್ಷದ ಎಂಬತ್ತು ಸಾವಿರ ಗ್ಯಾರಂಟಿ ಕಾರ್ಡ್‍ಗಳು ಹಂಚಿಕೆಯಾಗಿದೆ. ಇದರ ಜೊತೆಗೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನು ಹೊಸ ಹೊಸ ಗ್ಯಾರಂಟಿಗಳು ಜನತೆಗೆ ಸಿಗುತ್ತದೆ. ಪ್ರಿಯಾಂಕಾ ಗಾಂಧಿ ಪ್ರಚಾರದಿಂದ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿಯಲ್ಲಿಯೂ ಕಾಂಗ್ರೆಸ್ ಗೆಲ್ಲಲಿದೆ ಎಂದರು.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಹಿಂದುಳಿದ ವರ್ಗಗಳ ಅಧ್ಯಕ್ಷ ಎನ್.ಡಿ.ಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಮೆಹಬೂಬ್‍ ಖಾತೂನ್ ಇದ್ದರು.