ಚುನಾವಣೆಗೆ ಖರ್ಚಿಗೆ ಬರ ಪರಿಹಾರ ತಡೆ: ಅಶೋಕ್‌

| Published : May 06 2024, 01:33 AM IST / Updated: May 06 2024, 04:29 AM IST

ಚುನಾವಣೆಗೆ ಖರ್ಚಿಗೆ ಬರ ಪರಿಹಾರ ತಡೆ: ಅಶೋಕ್‌
Share this Article
  • FB
  • TW
  • Linkdin
  • Email

ಸಾರಾಂಶ

ಚುನಾವಣೆಗೆ ಖರ್ಚು ಮಾಡಲು ಹಾಗೂ ಗ್ಯಾರಂಟಿ ಯೋಜನೆಗಳಿಗಾಗಿ ಕಾಂಗ್ರೆಸ್‌ ಸರ್ಕಾರ ಬರ ಪರಿಹಾರವನ್ನು ತಡೆ ಹಿಡಿದುಕೊಂಡಿದೆ. ಇದನ್ನು ಕೂಡಲೇ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದ್ದಾರೆ.

 ಬೆಂಗಳೂರು :  ಚುನಾವಣೆಗೆ ಖರ್ಚು ಮಾಡಲು ಹಾಗೂ ಗ್ಯಾರಂಟಿ ಯೋಜನೆಗಳಿಗಾಗಿ ಕಾಂಗ್ರೆಸ್‌ ಸರ್ಕಾರ ಬರ ಪರಿಹಾರವನ್ನು ತಡೆ ಹಿಡಿದುಕೊಂಡಿದೆ. ಇದನ್ನು ಕೂಡಲೇ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದ್ದಾರೆ.

ಭಾನುವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬರಗಾಲದ ಪರಿಹಾರ ವಿತರಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ರಾಜಕೀಯ ಮಾಡುತ್ತಾ ಕಟುಕನಂತೆ ವರ್ತಿಸುತ್ತಿದೆಯೇ ಹೊರತು ಕಾಳಜಿ ತೋರುತ್ತಿಲ್ಲ. ಜಾಹೀರಾತು ನೋಡಿ ರಾಜಕೀಯ ಮಾಡುವುದನ್ನು ಬಿಟ್ಟರೆ ರೈತರ ಸಂಕಷ್ಟಕ್ಕೆ ಮಿಡಿಯುವ ಕೆಲಸ ಮಾಡಿಲ್ಲ ಎಂದು ಹರಿಹಾಯ್ದರು.

ಕಾಂಗ್ರೆಸ್‌ ನಾಯಕರ ಯೋಗ್ಯತೆಗೆ ಒಂದು ರುಪಾಯಿ ಬರ ಪರಿಹಾರವನ್ನೂ ನೀಡಿಲ್ಲ. ಕೇಂದ್ರ ಸರ್ಕಾರ ಈಗಾಗಲೇ ಪರಿಹಾರ ನೀಡಿದ್ದರೂ ಅದನ್ನು ರೈತರಿಗೆ ಕೊಡದೆ ಗ್ಯಾರಂಟಿಗೆ ಬಳಸಿಕೊಳ್ಳಲಾಗುತ್ತಿದೆ. ಇದಕ್ಕಾಗಿಯೇ ಪರಿಹಾರ ವಿತರಣೆಗೆ ವಿಳಂಬ ಮಾಡಲಾಗಿದೆ ಎಂದು ಆರೋಪಿಸಿದರು.

ರೈತರು ಪರಿಹಾರ ಕೇಳಿದರೆ ನಿಮ್ಮ ಮನೆಯ ಹೆಂಗಸರಿಗೆ ಎರಡು ಸಾವಿರ ರು. ಕೊಡಲಿಲ್ಲವೇ ಎಂಬುದಾಗಿ ಶಾಸಕರು ಅಹಂಕಾರದಿಂದ ಮಾತಾಡುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ನೇತೃತ್ವದಲ್ಲಿ ಕೂಡಲೇ ಟಾಸ್ಕ್‌ಫೋರ್ಸ್‌ ರಚನೆ ಮಾಡಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ರಾಜ್ಯಾದ್ಯಂತ ಜಾನುವಾರುಗಳಿಗೆ ಮೇವಿನ ಕೊರತೆ ಕಂಡುಬಂದಿದ್ದು, ಇದಕ್ಕಾಗಿ ಗೋಶಾಲೆಗಳನ್ನು ಆರಂಭಿಸಬೇಕು. ಇಲ್ಲವಾದರೆ ಎಷ್ಟು ಗೋಶಾಲೆ ಆರಂಭಿಸಿದ್ದಾರೆ ಎಂದು ಲೆಕ್ಕ ನೀಡಬೇಕು ಎಂದು ಆಗ್ರಹಿಸಿದರು.