ಆಮಿಷ ಒಡ್ಡಿದರೆ ಸಿವಿಜಿಲ್‌ ವೆಬ್‌ನಲ್ಲಿ ದೂರು ನೀಡಿ: ಚುನಾವಣಾಧಿಕಾರಿ

| Published : Apr 25 2024, 02:01 AM IST / Updated: Apr 25 2024, 04:24 AM IST

ಆಮಿಷ ಒಡ್ಡಿದರೆ ಸಿವಿಜಿಲ್‌ ವೆಬ್‌ನಲ್ಲಿ ದೂರು ನೀಡಿ: ಚುನಾವಣಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಆಮಿಷಕ್ಕೆ ಒಳಗಾಗದೆ ಸ್ವಇಚ್ಛೆಯಿಂದ ಎಲ್ಲರೂ ಮತ ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

  ಬೆಂಗಳೂರು :  ಆಮಿಷಕ್ಕೆ ಒಳಗಾಗದೆ ಸ್ವಇಚ್ಛೆಯಿಂದ ಎಲ್ಲರೂ ಮತ ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಮಹದೇವಪುರದ ಗುಂಜೂರಿನಲ್ಲಿರುವ ಕೃಪಾನಿಧಿ ಗ್ರೂಫ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಬುಧವಾರ ಏರ್ಪಡಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾನ ಹೇಗೆ ಮಾಡಬೇಕೆಂಬ ಬಗ್ಗೆ ವೋಟರ್ ಹೆಲ್ಪ್ ಲೈನ್ ತಂತ್ರಾಂಶದಲ್ಲಿ ಎಲ್ಲ ಮಾಹಿತಿ ಇದೆ. ಮತದಾರರ ಗುರುತಿನ ಚೀಟಿಯ ಸಂಖ್ಯೆ ನಮೂದಿಸಿದರೆ ಎಲ್ಲ ಮಾಹಿತಿ ಸಿಗಲಿದೆ ಎಂದರು.

ಮತದಾರರ ಪಟ್ಟಿಯಲ್ಲಿ ಹೆಸರಿದ್ದರೂ ಮತದಾನ ಮಾಡದಿರುವುದು ತಪ್ಪಾಗುತ್ತದೆ. ಆಮಿಷಕ್ಕೊಳಗಾಗಿ ಮತದಾನ ಮಾಡಿದರೆ ಅದು ಅಪರಾಧವಾಗಲಿದೆ. ವಿವೇಚನೆಯಿಂದ ಮತದಾನ ಮಾಡಬೇಕು. ಚುನಾವಣೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಚುನಾವಣಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಎಲ್ಲ ಕಡೆ ನಿಗಾವಹಿಸಿ ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದಾರೆ. ಆಮಿಷದ ಕುರಿತು ಮಾಹಿತಿ ಲಭ್ಯವಾದಲ್ಲಿ ಕೂಡಲೇ ಸಿವಿಜಿಲ್ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕಾಂತರಾಜು, ಮಹದೇವಪುರ ವಲಯ ಆಯುಕ್ತ ರಮೇಶ್, ವಲಯ ಜಂಟಿ ಆಯುಕ್ತೆ ದಾಕ್ಷಾಯಿಣಿ, ಕೃಪಾನಿಧಿ ಕಾಲೇಜಿನ ನಿರ್ದೇಶಕ ಡಾ. ಸ್ಯಾಮ್‌ಪಾಲ್‌ ಉಪಸ್ಥಿತರಿದ್ದರು.

ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ 1832 ವಿಶೇಷ ಮತಗಟ್ಟೆಗಳುಕನ್ನಡಪ್ರಭ ವಾರ್ತೆ ಬೆಂಗಳೂರುಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 58,834 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ 1832 ವಿಶೇಷ ಮತಗಟ್ಟೆಗಳಾಗಿವೆ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿ ಮನೋಜ್‌ ಕುಮಾರ್ ಮೀನಾ ತಿಳಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು, ಮಹಿಳೆಯರು ಮತದಾನದಲ್ಲಿ ಭಾಗವಹಿಸುವಂತೆ ಉತ್ತೇಜಿಸಲು ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಐದು ಸಖಿ ಮತಗಟ್ಟೆಗಳಂತೆ ಒಟ್ಟು 1120 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅಂಗವಿಕಲ ಸಿಬ್ಬಂದಿಯಿಂದ ಮತಗಟ್ಟೆ 224 ಇದ್ದು, 224 ಮತಗಟ್ಟೆ ಯುವ ಅಧಿಕಾರಿ, ಸಿಬ್ಬಂದಿಯಿಂದ ನಿರ್ವಹಿಸಲಾಗುತ್ತದೆ ಎಂದು ಹೇಳಿದರು.ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 40 ಮತಗಟ್ಟೆಗಳನ್ನು ಬುಡಕಟ್ಟು ಜನರ ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಬಿಂಬಿಸುವ ರೀತಿಯಲ್ಲಿ ಅಲಂಕರಿಸಲಾಗುತ್ತಿದೆ ಎಂದರು.