ಧರ್ಮಸ್ಥಳ ಸಂಸ್ಥೆಯಿಂದ ಅರ್ಥಪೂರ್ಣ ಕಾರ್ಯ

| Published : Oct 08 2023, 12:00 AM IST

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ದುಶ್ಚಟಗಳಿಗೆ ಒಳಗಾದ ಜನರನ್ನು ಮತ್ತು ಅವರ ಕುಟುಂಬಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ ಎಂದು ಶಾಸಕ ಎಚ್.ಟಿ.ಮಂಜು ಶ್ಲಾಘಿಸಿದರು.ಪಟ್ಟಣದ ಜಯಮ್ಮ ಶಿವಲಿಂಗೇಗೌಡ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ನಡೆದ ದುಶ್ಚಟ ಮುಕ್ತ ಸಮಾಜಕ್ಕಾಗಿ ಜನ ಜಾಗೃತಿ ಜಾಥಾ ಮತ್ತು ವ್ಯಸನ ಮುಕ್ತ ಸಾಧಕರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಶಾಸಕ ಹೆಚ್ .ಟಿ.ಮಂಜು ಅಭಿಮತ । ಜನ ಜಾಗೃತಿ ಜಾಥಾ, ವ್ಯಸನ ಮುಕ್ತ ಸಾಧಕರ ಸಮಾವೇಶ ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ದುಶ್ಚಟಗಳಿಗೆ ಒಳಗಾದ ಜನರನ್ನು ಮತ್ತು ಅವರ ಕುಟುಂಬಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ ಎಂದು ಶಾಸಕ ಎಚ್.ಟಿ.ಮಂಜು ಶ್ಲಾಘಿಸಿದರು. ಪಟ್ಟಣದ ಜಯಮ್ಮ ಶಿವಲಿಂಗೇಗೌಡ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ನಡೆದ ದುಶ್ಚಟ ಮುಕ್ತ ಸಮಾಜಕ್ಕಾಗಿ ಜನ ಜಾಗೃತಿ ಜಾಥಾ ಮತ್ತು ವ್ಯಸನ ಮುಕ್ತ ಸಾಧಕರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ವ್ಯಸನ ಮುಕ್ತ ಸಮಾಜ ನಿರ್ಮಾಣ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನಸು. ಇದನ್ನು ನನಸು ಮಾಡುವ ದಿಕ್ಕಿನಲ್ಲಿ ಧರ್ಮಸ್ಥಳ ಸಂಸ್ಥೆ ಕೆಲಸ ಮಾಡುವ ಮೂಲಕ ಗಾಂಧಿ ಜಯಂತಿಯನ್ನು ಅರ್ಥಪೂರ್ಣಗೊಳಿಸುತ್ತಿದೆ ಎಂದು ಹೇಳಿದರು. ದುಶ್ಚಟಗಳು ಕೇವಲ ಒಬ್ಬ ವ್ಯಕ್ತಿ ಆರೋಗ್ಯ ಮತ್ತು ಆರ್ಥಿಕತೆಯನ್ನು ಹಾಳು ಮಾಡುವುದಿಲ್ಲ. ಬದಲಾಗಿ ಒಂದು ಕುಟುಂಬ ಮತ್ತು ದೇಶದ ಸಾಮಾಜಿಕ ಆರೋಗ್ಯವನ್ನೂ ನಾಶಪಡಿಸುತ್ತದೆ. ಕುಡಿತಕ್ಕೆ ಒಳಗಾದವರನ್ನು ಶಿಬಿರಗಳ ಮೂಲಕ ಚಟದಿಂದ ಮುಕ್ತರನ್ನಾಗಿಸಲು ಧರ್ಮಸ್ಥಳ ಸಂಸ್ಥೆ ಶ್ರಮಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮಹಾತ್ಮ ಗಾಂಧಿಜೀ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ಧರ್ಮಸ್ಥಳ ಸಂಸ್ಥೆ ನೂರಾರು ಯೋಜನೆಗಳನ್ನು ರೂಪಿಸಿ ಗ್ರಾಮೀಣ ಅಭಿವೃದ್ದಿಗೆ ದುಡಿಯುತ್ತಿದೆ. ಮಹಿಳಾ ಸಭಲೀಕರಣ ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ. ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸುತ್ತಿದ್ದು ಇತರರಿಗೆ ಮಾದರಿಯಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವ್ಯಸನಮುಕ್ತರನ್ನು ಗೌರವಿಸಲಾಯಿತು. ಇದಕ್ಕೂ ಮುನ್ನ ಪಟ್ಟಣದ ಕೆ.ಪಿ.ಎಸ್ ಶಾಲೆಯ ಆವರಣದಿಂದ ಜಯಮ್ಮ ಶಿವಲಿಂಗೇಗೌಡ ಕಲ್ಯಾಣ ಮಂಟಪದವರೆಗೂ ಮದ್ಯಪಾನ ವಿರೋಧಿ ಘೋಷಣೆಗಳನ್ನು ಕೂಗೂತ್ತಾ ಪ್ರಮುಖ ರಸ್ತೆಗಳಲ್ಲಿ ಜನಜಾಗೃತಿ ಜಾಥಾ ನಡೆಸಲಾಯಿತು. ಜಾಥಾಗೆ ಆರ್.ಟಿ.ಓ ಅಧಿಕಾರಿ ಮಲ್ಲಿಕಾರ್ಜುನ್ ಚಾಲನೆ ನೀಡಿದರು. ಸಂಸ್ಥೆ ಯೋಜನಾ ನಿರ್ದೇಶಕ ಕೇಶವ ದೇವಾಂಗ, ಪಾಂಡವಪುರದ ಕನ್ನಡ ಪ್ರಾಧ್ಯಾಪಕಿ ಸರಸ್ವತಿ ಮಾತನಾಡಿದರು. ಚನ್ನರಾಯಪಟ್ಟಣ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಜಯರಾಮ ಕೋಟಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಸಮಾಜ ಸೇವಕ ಆರ್.ಟಿ.ಓ ಅಧಿಕಾರಿ ಮಲ್ಲಿಕಾರ್ಜುನ, ಎಂಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್.ಕೆ.ಅಶೋಕ್, ತಾಲೂಕು ಜೆಡಿಎಸ್ ಅಧ್ಯಕ್ಷ ಎ.ಎನ್.ಜಾನಕೀರಾಂ, ಕಲ್ಯಾಣ ಮಂಟಪದ ಮಾಲೀಕ ಕೆ.ಎಸ್.ಬಸವೇಗೌಡ, ತಾಲೂಕು ಯೋಜನಧಿಕಾರಿ ಮಮತಾ ಶೆಟ್ಟಿ, ಗಾಂಧಿ ಜಯಂತಿ ಆಚರಣಾ ಸಮಿತಿ ಅಧ್ಯಕ್ಷ ಅಂ.ಚಿ.ಸಣ್ಣಸ್ವಾಮೀಗೌಡ, ಸದಸ್ಯರಾದ ಅರವಿಂದ ಕಾರಂತ, ವಸಂತಕುಮಾರ್, ಪರಮೇಶ, ಮಂಜುನಾಥ್, ವಾಸು, ಸೋಮಪ್ಪ, ಮಂಜುಳ, ಉಷಾ, ಕೆ.ಎಸ್.ರಾಜೇಶ್, ಮುಖಂಡರಾದ ಶೀಳನೆರೆ ಅಂಬರೀಶ್, ಅಕ್ಕಿಹೆಬ್ಬಾಳು ಎ.ಆರ್.ರಘು ಸೇರಿದಂತೆ ಹಲವರು ಇದ್ದರು. -------- 7ಕೆಎಂಎನ್ ಡಿ15 ಜನ ಜಾಗೃತಿ ಜಾಥಾ ಮತ್ತು ವ್ಯಸನ ಮುಕ್ತ ಸಾಧಕರ ಸಮಾವೇಶ ಕಾರ್ಯಕ್ರಮವನ್ನು ಶಾಸಕ ಎಚ್.ಟಿ. ಮಂಜು ಉದ್ಘಾಟಿಸಿದರು.